More

    ಹಿರಿಯ ನಟ ಬ್ಯಾಂಕ್ ಜನಾರ್ದನ್​ಗೆ ಹೃದಯಾಘಾತ

    ಬೆಂಗಳೂರು: ಸ್ಯಾಂಡಲ್​ವುಡ್​ನ ಹಿರಿಯ ನಟ  ಬ್ಯಾಂಕ್ ಜನಾರ್ದನ್  ಅವರಿಗೆ  ಹೃದಯಾಘಾತವಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಲಾಗುತ್ತಿದೆ.

    ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎನ್ನಲಾಗಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

    ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.

    ಬ್ಯಾಂಕ್ ಜನಾರ್ದನ್ ಜನಿಸಿದ್ದು 1949ರಲ್ಲಿ. ಅವರು 1991ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಅಜಗಜಾಂತರ’ ಅವರ ನಟನೆಯ ಮೊದಲ ಸಿನಿಮಾ. ಆ ಬಳಿಕ ‘ಗೌರಿ ಗಣೇಶ’, ‘ತರ್ಲೆ ನನ್ಮಗ’, ‘ಶ್’ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದರು.

    ರಾಜ್ಯೋತ್ಸವ ರಸಪ್ರಶ್ನೆ - 24

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts