

ಬೆಂಗಳೂರು: ಹಿರಿಯ ನಟಿ ಜಯಂತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಜಯಂತಿ ಅವರಿಗೆ ಕರೊನಾ ಟೆಸ್ಟ್ ಕೂಡ ಮಾಡಲಾಗಿದೆ. ವರದಿ ನೆಗೆಟಿವ್ ಬಂದಿದೆ. ಜಯಂತಿ ಅವರು ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ನಾಲ್ಕು ತಿಂಗಳ ಹಿಂದೆ ಕೂಡ ಅವರಲ್ಲಿ ಅಸ್ತಮಾ ಉಲ್ಬಣ ಆಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದು. ಆಗಲೂ ಸಹ ಐಸಿಯುವಿನಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ನಂತರ ಚೇತರಿಸಿಕೊಂಡಿದ್ದರು.