ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್​

ನವದೆಹಲಿ: ನಿರೀಕ್ಷೆಯಂತೆ ಬಿಜೆಪಿ ಗೆಲುವಿನತ್ತ ಮುನ್ನಡೆಯುತ್ತಿದೆ. ಈಗಾಗಲೇ ಬಿಜೆಪಿ ಇಂದು ಸಂಜೆ ದೆಹಲಿಯ ಮುಖ್ಯಕಚೇರಿಯಲ್ಲಿ ಸ್ವಾಗತ ಸಮಾರಂಭವನ್ನೂ ಏರ್ಪಡಿಸಿದೆ.

ಈ ಮಧ್ಯೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್​ ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗಾಗಲೇ ಶುಭ ಕೋರಿದ್ದಾರೆ. ಹಾಗೇ ದೇಶದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯದ್ದು ಅತಿದೊಡ್ಡ ಗೆಲುವು ಎಂದು ಅವರು ಹೇಳಿದ್ದಾರೆ. ಮೋದಿಯವರಿಗೆ ಬಿಜೆಪಿಗೆ ಇಷ್ಟು ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿದ್ದಕ್ಕೆ ಅಭಿನಂದನೆಗಳು ಹಾಗೇ ದೇಶದ ಜನರಿಗೂ ಧನ್ಯವಾದಗಳು ಎಂದು ಸಚಿವೆ ಟ್ವೀಟ್​ ಮಾಡಿದ್ದಾರೆ.

2014ರ ಚುನಾವಣೆಯಲ್ಲಿ ಬಿಜೆಪಿ 285 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಎನ್​ಡಿಎ ಮೈತ್ರಿಕೂಟಕ್ಕೆ ಒಟ್ಟು 336 ಸೀಟುಗಳು ಲಭಿಸಿದ್ದವು.

Leave a Reply

Your email address will not be published. Required fields are marked *