ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮವಿಭೂಷಣ ಪ್ರೊ ಎಂ ಎಸ್ ವಲಿಯಥಾನ್ ನಿಧನ

M VSankaran
Published on

ಉಡುಪಿ:  ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮ ವಿಭೂಷಣ ಪ್ರೊ.ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್​(90)ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ವಲಿಯಥಾನ್​  ತಡರಾತ್ರಿ 9.14ಕ್ಕೆ ಮಣಿಪಾಲದಲ್ಲಿ ನಿಧನರಾಗಿದ್ದಾರೆ. ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಹೃದಯ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ತಂತ್ರಜ್ಞಾನಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ.

ತಿರುವನಂತಪುರದ ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದ ಡಾ.ವಲಿಯತ್ತನ್ ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಆಫ್ ಎಡಿನ್‌ಬರ್ಗ್, ಇಂಗ್ಲೆಂಡ್ ಮತ್ತು ಕೆನಡಾದಿಂದ ಫೆಲೋಶಿಪ್ ಪಡೆದಿದ್ದರು. ತಿರುವನಂತಪುರದಲ್ಲಿ ಶ್ರೀ ಚಿತ್ರ ತಿರುನಾಳ್ ಸಂಸ್ಥೆಯನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇಪ್ಪತ್ತು ವರ್ಷಗಳ ಕಾಲ ಹೃದಯ ಶಸ್ತ್ರಚಿಕಿತ್ಸೆಯ ಪ್ರಾಧ್ಯಾಪಕರಾಗಿ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 1993 ರಿಂದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮೊದಲ ಉಪಕುಲಪತಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅವರಿಗೆ ಪದ್ಮವಿಭೂಷಣ (2005), ಪದ್ಮಶ್ರೀ (2002), ಡಾ. ಬಿ. ಸಿ. ರಾಯ್ ರಾಷ್ಟ್ರೀಯ ಪ್ರಶಸ್ತಿ ಸಂದಿತ್ತು.

ಉಡುಪಿ ಜಿಲ್ಲೆ ಮಣಿಪಾಲದ MAHE ಯುನಿವರ್ಸಿಟಿಯ ವಿಶ್ರಾಂತ ಉಪಕುಲಪತಿಯಾಗಿದ್ದ ಡಾ.ವಲಿಯಥಾನ್ ಅವರು ಭಾರತೀಯ ವೈದ್ಯಕೀಯ ಸಂಘದಿಂದ ಜೀವಮಾನ ಸಾಧನೆ ಪ್ರಶಸ್ತಿ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net