ಹಿರಿಯ ನಾಗರಿಕರ ಪ್ರತಿಭಟನೆ 16ರಂದು

Published on

ಹುಬ್ಬಳ್ಳಿ: ಹಿರಿಯ ನಾಗರಿಕರ ವೃದ್ಧಾಪ್ಯ ವೇತನ 10ಸಾವಿರ ರೂ.ಗೆ ಹೆಚ್ಚಿಸುವುದು ಮತ್ತಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಜ. 16ರಂದು ಬೆಳಗ್ಗೆ 10.30ಕ್ಕೆ ಪ್ರತಿಭಟನಾ ಮೆರವಣಿಗೆ ಏರ್ಪಾಟಾಗಿದೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಎ. ಪಾಟೀಲ, ನಗರದ ನೆಹರು ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ನಂತರ ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡು ಬಹಿರಂಗ ಸಭೆ ನಡೆಸಲಾಗುವುದು. ತಹಸೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಲಾಗುವುದು ಎಂದು ವಿವರಿಸಿದರು.

ಅಖಿಲ ಭಾರತ ಹಿರಿಯ ನಾಗರಿಕರ ಜೀವನ ಗೌರವ ಅಭಿಯಾನ ಅಧ್ಯಕ್ಷ ವಿಜಯ ದೇಶಮುಖ, ರಾಷ್ಟ್ರೀಯ ಅರ್ಥ ಕ್ರಾಂತಿ ಟ್ರಸ್ಟ್ ಅಧ್ಯಕ್ಷ ಅನಿಲ್ ಬೋಕಿಲ್, ಸಲಹೆಗಾರ ಡಾ. ಸ್ವಾಮಿ ಕಮಲ ಮನೋಹರ ಆಗಮಿಸುವರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಳ್ಳಬೇಕಾದ ನಿರ್ಧಾರ ಹಾಗೂ ಬಜೆಟ್‌ನಲ್ಲಿ ಬೇಡಿಕೆ ಈಡೇರಿಸಲು ಆಗ್ರಹಿಸಲಾಗುವುದು. 5 ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದರು.

ಡಿ.ಟಿ. ಪಾಟೀಲ, ಎಂ.ಪಿ. ಕುಂಬಾರ, ಅಶೋಕ ಚಂದಾವರಕರ, ಕೆ. ವಿಠ್ಠಲರಾವ್, ಎಸ್.ಎಂ. ಕೋಳೂರ, ಡಾ. ಸುನಂದಾ ಬೆನ್ನೂರ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net