ಹಿರಿಯ ಕಾಂಗ್ರೆಸ್​ ನಾಯಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು

Shamanuru Shivashankarappa
Published on

ದಾವಣಗೆರೆ: ಹಿರಿಯ ಕಾಂಗ್ರೆಸ್​ ನಾಯಕ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಹೃದಯ ಸಂಬಂಧಿ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ದಾವಣಗೆರೆ ಎಸ್ಸ್​ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಿ ಬಳಿಕ ಬೆಂಗಳೂರಿಗೆ ರವಾನಿಸಲಾಗಿದೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ವೈದ್ಯರು ಶಾಮನೂರು ಅವರಿಗೆ ಫೇಸ್ ಮೇಕರ್ ಅಳವಡಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್‌ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರಿಗೆ 94 ವರ್ಷ ವಯಸ್ಸಾಗಿದ್ದು, ಕಫದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಶುಕ್ರವಾರ ಬೆಳಗ್ಗೆ ತೀವ್ರ ಅಸ್ವಸ್ಥರಾದರು. ಹೆಚ್ಚುವರಿ ಚಿಕಿತ್ಸೆಗೆಂದು ನಗರದ ಎಸ್‌ಎಸ್‌ ಹೈಟೆಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ವೈದ್ಯರು ಹೆಚ್ಚಿನ ನಿಗಾ ವಹಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಇತ್ತ ನೆಚ್ಚಿನ ನಾಯಕ ಆಸ್ಪತ್ರೆ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net