ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್​ ಇನ್ನಿಲ್ಲ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ದ ಮಾಜಿ ಅಧ್ಯಕ್ಷ ಹಾಗೂ ಬೆಂಗಳೂರಿನ ಪ್ರೆಸ್ ಕ್ಲಬ್ ಮಾಜಿ ಉಪಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ಅವರು ಇಂದು ಬೆಂಗಳೂರಿನಲ್ಲಿ ನಿಧನರಾದರು. 66 ವರ್ಷ ವಯಸ್ಸಾಗಿದ್ದ ಗುಡಿಹಳ್ಳಿ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮತ್ತು ರಂಗಭೂಮಿಗೆ ವಿಶೇಷ ಕೊಡುಗೆ ನೀಡಿದ್ದ ಗುಡಿಹಳ್ಳಿ ಅವರು, ಪ್ರಜಾವಾಣಿ ದಿನಪತ್ರಿಕೆಯಲ್ಲಿ ಸುದೀರ್ಘ ಅವಧಿ ಕೆಲಸ ಮಾಡಿದವರು. ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ದುಡಿದವರು. ಕೆಯುಡಬ್ಲ್ಯೂಜೆ ಸಂಘಟನೆಯಲ್ಲಿ ಗುಡಿಹಳ್ಳಿ ನಾಗರಾಜ್ … Continue reading ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್​ ಇನ್ನಿಲ್ಲ