S K Shyamasunder : ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರು ಸೋಮವಾರ (ಏಪ್ರಿಲ್ 14) ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದು, ಕನ್ನಡ ಪತ್ರಿಕೋದ್ಯಮದ ಮತ್ತೊಂದು ಕೊಂಡಿ ಕಳಚಿಕೊಂಡಿದೆ.

ಶ್ಯಾಮಸುಂದರ್ ಅವರು ಬೆಂಗಳೂರಿನ ದಿಗ್ವಿಶ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಆರೋಗ್ಯ ಚೇತರಿಸದೇ ಕೋಮಾಗೆ ಜಾರಿದ್ದರು. ನಿರಂತರವಾಗಿ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಸೋಮರಾತ್ರಿ ಹೃದಯಾಘಾತದಿಂದ ಶಾಶ್ವತವಾಗಿ ಕಣ್ಮುಚ್ಚಿದ್ದಾರೆ. ಶ್ಯಾಮಸುಂದರ್ ಅವರಿಗೆ 72 ವರ್ಷ ವಯಸ್ಸಾಗಿತ್ತು.
ಇದನ್ನೂ ಓದಿ: ಭೂ ಹಕ್ಕಿನ ಹೋರಾಟಕ್ಕೆ ‘ಭೂ ದಾನ’ ಸ್ಫೂರ್ತಿ: ಭೂಮಿ ಒಡೆತನದ ಕನಸು ಕಂಡಿದ್ದ ಡಾ.ರಾಜಕುಮಾರ್
ಕನ್ನಡ ಪತ್ರಿಕೋದ್ಯಮಲ್ಲಿ ಸುಮಾರು 39 ವರ್ಷ ಅನುಭವವನ್ನು ಹೊಂದಿದ್ದರು. ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಉನ್ನತ ಜವಾಬ್ದಾರಿಯನ್ನು ನಿರ್ವಹಿಸಿರುವ ಶ್ಯಾಮಸುಂದರ್ ಅವರು ಕನ್ನಡ ಡಿಜಿಟಲ್ ಮಾಧ್ಯಮಕ್ಕೆ ಅಪಾರ ಕೊಡುಗೆ ನೀಡಿದರು. ಪತ್ರಕರ್ತರ ಬಳಗದಲ್ಲಿ ಶಾಮಿ ಎಂದೇ ಪ್ರಸಿದ್ಧಿ ಪಡೆದಿದ್ದರು. ಅಲ್ಲದೆ, ಅವಿವಾಹಿತರಾಗಿದ್ದ ಶ್ಯಾಮಸುಂದರ್, ಜಗ್ಗೇಶ್ ನಟನೆಯ ಎದ್ದೇಳು ಮಂಜುನಾಥ ಸಿನಿಮಾದಲ್ಲಿ ಬ್ಯಾಂಕ್ ಮ್ಯಾನೇಜರ್ ಪಾತ್ರವನ್ನೂ ನಿರ್ವಹಿಸಿದ್ದರು.
ಶ್ಯಾಮಸುಂದರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
– ಮುಖ್ಯಮಂತ್ರಿ… pic.twitter.com/WZmifEo7zz— CM of Karnataka (@CMofKarnataka) April 14, 2025
ಅತ್ಯಾಚಾರಿ ಎನ್ಕೌಂಟರ್ಗೆ ವ್ಯಾಪಕ ಶ್ಲಾಘನೆ; ಗುಂಡು ಹೊಡೆದವರು ಮಹಿಳಾ ಎಸ್ಐ
ಐಪಿಎಲ್ಗೆ ಯಶಸ್ವಿ ಪುನರಾಗಮ ಕಂಡ ಬಗ್ಗೆ ಕನ್ನಡಿಗ ಕರುಣ್ ನಾಯರ್ ಹೇಳಿದ್ದಿಷ್ಟು…