

ಸುಳ್ಯ: ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ ಡಾ.ಗಿರೀಶ್ ಭಾರದ್ವಾಜ್ ಸಮಾವೇಶ ಉದ್ಘಾಟಿಸಿದರು.
ಅಜ್ಜಾವರ ಚೈತನ್ಯ ಸೇವಾಶ್ರಮದ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ, ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ನಿಟ್ಟೆ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ನಿರಂಜನ್ ಚಿಪ್ಲೂಣ್ಕರ್, ಎಂಆರ್‌ಪಿಎಲ್ ಆಡಳಿತ ನಿರ್ದೇಶಕ ಡಾ.ಸತೀಶ್, ಸ್ವರೂಪ ಅಧ್ಯಯನ ಕೇಂದ್ರದ ಮುಖ್ಯಸ್ಥರಾದ ಗೋಪಾಡ್ಕರ್, ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಲಿಂಗಪ್ಪ ಗೌಡ, ಸುಮಿತ್ರ ಎಂ.ಜಿ, ಪ್ರಮುಖರಾದ ಚಂದ್ರ ಕೋಲ್ಚಾರ್, ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಡಾ.ವೀಣ, ಗೀತಾ ಎಂ.ಎಸ್, ಮಾವಜಿ ಮುದ್ದಪ್ಪ ಗೌಡ, ಎಸ್.ಸಂಶುದ್ದೀನ್, ಜೀವನ್ ರಾಮ್, ಡಾ.ರಂಗಯ್ಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ,ಹಿರಿಯ ವಿದ್ಯಾರ್ಥಿ ಸಂದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಅಮತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಬಿ.ಸದಾಶಿವ, ಸಂಚಾಲಕ ಕೆ.ಎಂ.ಮುಸ್ತಫಾ, ಹಿರಿಯ ಸಂ ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ, ಕೋಶಾಧಿಕಾರಿ ಕೆ.ಟಿ.ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿ ಸಂ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಸ್ವಾಗತಿಸಿದರು. ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.