17.8 C
Bengaluru
Wednesday, January 22, 2020

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

Latest News

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ ಸೂಚ್ಯಂಕ ನಿಫ್ಟಿ 12,000ಕ್ಕಿಂತ ಕೆಳಕ್ಕೆ ಕುಸಿದು ವಹಿವಾಟು ಅಂತ್ಯಗೊಳಿಸಿದೆ.

ಬ್ಯಾಂಕಿಂಗ್ ಮತ್ತು ಆಟೋ ಸೆಕ್ಟರ್​ನ ಷೇರುಗಳು ಭಾರಿ ನಷ್ಟ ಅನುಭವಿಸಿದ್ದು, ಈ ಕುಸಿತಕ್ಕೆ ಕಾರಣ. ಭಾರತೀಯ ರಿಸರ್ವ್ ಬ್ಯಾಂಕ್​ (ಆರ್​ಬಿಐ) ತನ್ನ ಪ್ರಮುಖ ದರಗಳಲ್ಲಿ ಯಥಾ ಸ್ಥಿತಿ ಕಾಪಾಡಿಕೊಂಡು, ನಿಧಾನಗತಿಯ ಆರ್ಥಿಕ ಬೆಳೌಣಿಗೆಯನ್ನು ತೋರಿಸಿತ್ತು. ಇದರ ಬೆನ್ನಲ್ಲೇ ಹೂಡಿಕೆದಾರರು ಎಚ್ಚೆತ್ತುಕೊಂಡಿದ್ದರ ಪರಿಣಾಮ ಇಂದು ಪೇಟೆಯ ಮೇಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಬೆಳಗ್ಗೆ ವಹಿವಾಟು ಆರಂಭವಾದಾಗ ಸೆನ್ಸೆಕ್ಸ್​ 100 ಅಂಶಗಳ ಏರಿಕೆ ದಾಖಲಿಸಿತಾದರೂ ನಂತರ ಕುಸಿಯಲಾರಂಭಿಸಿದ್ದು ಮತ್ತೆ ಚೇತರಿಕೆ ತೋರಿಸಲಿಲ್ಲ. ದಿನದ ವಹಿವಾಟಿನಲ್ಲಿ 40,393.46 ಅಂಶದ ಕನಿಷ್ಠ ಮಟ್ಟಕ್ಕೆ ತಲುಪಿದ್ದ ಸೆನ್ಸೆಕ್ಸ್​ ದಿನದ ಅಂತ್ಯಕ್ಕೆ 40,445.15 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿದೆ. ಇದೇ ರೀತಿ ನಿಫ್ಟಿ ಕೂಡ 96.90 ಅಂಶಗಳ ಕುಸಿತ ಕಂಡು 11,921.5 ರಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದೆ.

ಯೆಸ್​ ಬ್ಯಾಂಕ್ ಗರಿಷ್ಠ ಕುಸಿತ ಕಂಡರೆ, ಎಸ್​ಬಿಐ, ಇಂಡಸ್​ಇಂಡ್ ಬ್ಯಾಂಕ್, ಟಾಟಾ ಮೋಟಾರ್ಸ್​, ಮಹಿಂದ್ರಾ ಆ್ಯಂಡ್ ಮಹಿಂದ್ರಾ, ಎಚ್​ಡಿಎಫ್​ಸಿ ಷೇರುಗಳು ಕುಸಿತ ಕಂಡ ಪ್ರಮುಖ ಷೇರುಗಳು. ಇನ್ನೊಂದೆಡೆ, ಕೋಟಾಕ್ ಬ್ಯಾಂಕ್​, ಟಾಟಾ ಸ್ಟೀಲ್​, ಆರ್​ಐಎಲ್​, ಏಷ್ಯನ್ ಪೇಂಟ್​, ಟಿಸಿಎಸ್​, ಇನ್​​ಫೋಸಿಸ್​, ಎಚ್​ಡಿಎಫ್​ಸಿ ಬ್ಯಾಂಕ್​ಗಳು ಲಾಭದೊಂದಿಗೆ ದಿನದ ವಹಿವಾಟು ಮುಗಿಸಿವೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...