ದೇಶದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ವಿಷಯ ಮೊಬೈಲ್​​ನಲ್ಲಿ ಪತ್ತೆ: ಯುವಕನ ಬಂಧನ | Himachal Pradesh

Himachal Pradesh
Published on

Himachal Pradesh: ಹಿಮಾಚಲ ಪ್ರದೇಶಲ್ಲಿ ದೇಶದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಸೂಕ್ಷ್ಮ ವಿಷಯಗಳು 18 ವರ್ಷದ ಯುವಕನ ಮೊಬೈಲ್​​ನನಲ್ಲಿ ಕಂಡುಬಂದಿದ್ದು, ಆತನ್ನು ಬಂಧಿಸಲಾಗಿದೆ ಎಂದು ಗುರುವಾರ (ಮೇ.29) ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಸುಕಹಾರ್ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ. ಕಾಲೇಜು ಬಿಟ್ಟ ಅಭಿಷೇಕ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 152ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಇಲ್ಲಿನ ಪೊಲೀಸ್ ಪ್ರಧಾನ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಪೊಲೀಸ್ ತಂಡವು ಹಲವಾರು ದಿನಗಳಿಂದ ಶಂಕಿತನನ್ನು ಸೂಕ್ಷ್ಮವಾಗಿ ಗಮನಿಸುತ್ತಿತ್ತು, ಗುಪ್ತಚರ ಮಾಹಿತಿಯನ್ನು ಸಂಗ್ರಹಿಸಿ ಆತನ ಮೇಲೆ ನಿಗಾ ಇಟ್ಟಿತ್ತು. ಗುರುವಾರ ವಿಶೇಷ ತಂಡವು ಆರೋಪಿಯ ನಿವಾಸದ ಮೇಲೆ ದಾಳಿ ನಡೆಸಿ ಆತನನ್ನು ವಶಕ್ಕೆ ತೆಗೆದುಕೊಂಡಿದೆ.

ವಿಚಾರಣೆಗಾಗಿ ಆರೋಪಿ ಅಭಿಷೇಕ್​​ನ್ನು ಡೆಹ್ರಾ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಆತನ ಮೊಬೈಲ್ನಲ್ಲಿ ಸೂಕ್ಷ್ಮ ಮತ್ತು ಆಕ್ಷೇಪಾರ್ಹ ವಿಷಯ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net