ಸಂವೇದನಾಶೀಲದಿಂದ ವೃತ್ತಿ ಬದ್ಧತೆ : ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಓಂ ಗಣೇಶ್ ಉಪ್ಪುಂದ ಹೇಳಿಕೆ

samvedanasheela
ಜೆಸಿ ಭವನದಲ್ಲಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಶನಿವಾರ ಪತ್ರಿಕಾ ದಿನಾಚರಣೆಯಲ್ಲಿ ಹಿರಿಯ ಪತ್ರಕರ್ತ ಶ್ರೀಪತಿ ಹೆಗ್ಡೆ ಹಕ್ಲಾಡಿ ಅವರನ್ನು ಸನ್ಮಾನಿಸಲಾಯಿತು.
Published on

ಕುಂದಾಪುರ: ಬದಲಾವಣೆಯಾಗಿರುವ ಮಾಧ್ಯಮ ಜಗತ್ತು ಇಂದು ಮಾರುಕಟ್ಟೆ, ಪ್ರಸರಣ ವಿಭಾಗದಡಿ ಕಾರ್ಯನಿರ್ವಹಿಸುವ ಅನಿವಾರ್ಯತೆ ಸೃಷ್ಟಿಯಾಗಿರುವುದರಿಂದ, ಬದಲಾವಣೆ ಕಾಲಘಟ್ಟಕ್ಕೆ ಹೊಂದಿಕೊಂಡಿರುವ ಪತ್ರಕರ್ತರು ಸಂವೇದನಾಶೀಲರಾಗಿ ವೃತ್ತಿ ಬದ್ಧತೆ ಉಳಿಸುವ ಅನಿವಾರ್ಯತೆ ಹೆಚ್ಚಾಗಿದೆ ಎಂದು ಲೇಖಕ, ಜಾದೂಗಾರ ಓಂ ಗಣೇಶ್ ಉಪ್ಪುಂದ ಹೇಳಿದರು.

ಜೆಸಿ ಭವನದಲ್ಲಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪತ್ರಕರ್ತ ಶ್ರೀಪತಿ ಹೆಗ್ಡೆ ಹಕ್ಲಾಡಿ ಅವರನ್ನು ಸನ್ಮಾನಿಸಲಾಯಿತು. ಆಕಾಶ್ ನಿತ್ಯಾನಂದ ಗಾಣಿಗ ತೆಕ್ಕಟ್ಟೆ ಹಾಗೂ ಶ್ರೀದೇವಿ ಇನ್‌ಸ್ಟಿಟ್ಯೂಟ್‌ನ ನಿಖಿಲ್ ಅವರನ್ನು ಗೌರವಿಸಲಾಯಿತು. ಕುಂದಾಪುರ ಅಂಚೆ ಇಲಾಖೆ ಸಹಾಯಕ ಅಧೀಕ್ಷಕ ಸತೀಶ್ ಇಲಾಖೆ ಯೋಜನೆಗಳು ಹಾಗೂ ವಿಮಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಜಿಲ್ಲಾ ಮಾಜಿ ಸಹಾಯಕ ಗವರ್ನರ್ ಕೆ.ಆರ್.ನಾಯ್ಕ, ತಾಲೂಕು ಸಂಘದ ಉಪಾಧ್ಯಕ್ಷ ಚಂದ್ರಮ ತಲ್ಲೂರು, ಕೋಶಾಧಿಕಾರಿ ಟಿ.ಲೋಕೇಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಐಶ್ವರ್ಯ ಬೀಜಾಡಿ ಸ್ವಾಗತಿಸಿ, ಪ್ರಶಾಂತ ಪಾದೆ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕಾರಿ ಮಂಡಳಿ ಸದಸ್ಯ ಶ್ರೀಕಾಂತ ಹೆಮ್ಮಾಡಿ ನಿರೂಪಿಸಿದರು.

ಅನುಭವಗಳೇ ಜೀವನ ಪಾಠವಾಗುತ್ತದೆ. ಹಿಂದೆ ಕೃಷಿಯಂತೆ ವೃತ್ತಿಯನ್ನು ಹಸನು ಮಾಡಲು ಅವಕಾಶವಿದ್ದ ಪತ್ರಿಕೋದ್ಯಮ ಇಂದು ಪತ್ರಿಕಾರಂಗವಾಗಿದೆ. ಬರಹಗಳ ಮೂಲಕ ಪತ್ರಕರ್ತರು ಓದುಗರಿಗೆ ಹತ್ತಿರವಾಗಬೇಕು. -ಶ್ರೀಪತಿ ಹೆಗ್ಡೆ, ಹಕ್ಲಾಡಿ ಹಿರಿಯ ಪತ್ರಕರ್ತ

-ಶ್ರೀಪತಿ ಹೆಗ್ಡೆ, ಹಕ್ಲಾಡಿ ಹಿರಿಯ ಪತ್ರಕರ್ತ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net