More

    ಗ್ರಾಪಂ ಮೂಲಕ ಯುವನಿಽ ಅರಿವು ಮೂಡಿಸಿ: ಮಧು ಬಂಗಾರಪ್ಪ ಸೂಚನೆ

    ಶಿಕಾರಿಪುರ: ಯುವನಿಽ ಒಂದು ಅಪೂರ್ವ, ಜನಪರವಾದ, ಯುವಕರಿಗೆ ಸಹಕಾರಿಯಾಗಬಲ್ಲ ಯೋಜನೆಯಾಗಿದೆ. ಇದನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಈ ನಿಟ್ಟಿನಲ್ಲಿ ಅಽಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
    ಶಿಕಾರಿಪುರಕ್ಕೆ ದಿಢೀರ್ ಭೇಟಿ ನೀಡಿ ಯುವನಿಽ ಕಾರ್ಯಕ್ರಮಕ್ಕೆ ಸಂಬAಽಸಿದAತೆ ಅಽಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದರು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಽ ಯೋಜನೆ ಸಮರ್ಪಕವಾಗಿ ಜಾರಿಯಾಗಲಿದೆ. ಜನರಿಗೆ ಈ ಯೋಜನೆ ಬಗ್ಗೆ ಎಲ್ಲ ಗ್ರಾಪಂಗಳ ಮೂಲಕ ಅರಿವು ಮೂಡಿಸಬೇಕು ಎಂದು ತಿಳಿಸಿದರು.
    ಬಳಿಕ ಕಾಂಗ್ರೆಸ್ ಕಚೇರಿಗೆ ತೆರಳಿ ಕಾರ್ಯಕರ್ತರ ಜತೆ ಯುವನಿಽ ಕಾರ್ಯಕ್ರಮದ ಕುರಿತು ಚರ್ಚಿಸಿದ ಅವರು ಸರ್ಕಾರದ ಎಲ್ಲ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪಬೇಕು. ಇದಕ್ಕೆ ಪಕ್ಷದ ಕಾರ್ಯಕರ್ತರೂ ಸಹರಿಸಬೇಕು ಎಂದರು.
    ದೇವರಾಜ ಅರಸು ಕಾಲದಲ್ಲಿ ನಿರುದ್ಯೋಗಿ ಪದವೀಧರರಿಗೆ ಸ್ಟೆÊಫಂಡ್ ಯೋಜನೆ ಜಾರಿಗೆ ತಂದಿದ್ದರು. ಇದರಿಂದ ನಿರುದ್ಯೋಗಿ ಯುವಕರಿಗೆ ಅನುಕೂಲವಾಗಿತ್ತು. ಅದೇ ಮಾದರಿಯಲ್ಲಿ ನಮ್ಮ ಸರ್ಕಾರ ವಿವೇಕಾನಂದ ಜನ್ಮದಿನದಂದು ಯುವನಿಽ ಯೋಜನೆಗೆ ಚಾಲನೆ ನೀಡುತ್ತಿದ್ದು, ಪ್ರತಿಯೊಬ್ಬ ಫಲಾನುಭವಿಗಳೂ ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.
    ಎಸಿ ಡಾ. ಯತೀಶ್, ತಹಸೀಲ್ದಾರ್ ಮಲ್ಲೇಶ್ ಬಿ.ಪೂಜಾರ್, ಇಒ ಪರಮೇಶ್, ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್, ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಲ್ಮಾರ್ ಮಹೇಶ್, ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕವಲಿ ಗಂಗಾಧರ, ಜಿ¯್ಲÁ ಉಪಾಧ್ಯಕ್ಷ ಭಂಡಾರಿ ಮಾಲತೇಶ್, ಪುರಸಭೆ ಸದಸ್ಯ ಎಸ್.ಪಿ.ನಾಗರಾಜ ಗೌಡ, ಉಮೇಶ್ ಕೋಡಿಹಳ್ಳಿ ಇತರರಿದ್ದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಜನ ಕಾಂಗ್ರೆಸ್‌ಗೆ ಬಹುಮತ ನೀಡಿ ಆಶೀರ್ವದಿಸಿz್ದÁರೆ. ಜನತೆಯ ನಿರೀಕ್ಷೆಗಳಿಗೆ ಸರ್ಕಾರ ಸ್ಪಂದಿಸುತ್ತಿದೆ.
    | ಮಧು ಬಂಗಾರಪ್ಪ
    ಜಿಲ್ಲಾ ಉಸ್ತುವಾರಿ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts