More

    ಪದವಿ ಪರೀಕ್ಷೆಗೆ ಉತ್ತಮ ಹಾಜರಾತಿ: ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ

    ಮಂಗಳೂರು: ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಸೋಮವಾರ ಆರಂಭವಾಗಿರುವ ಪದವಿ ಮತ್ತು ಸ್ನಾತಕೋತ್ತರ ಸೆಮಿಸ್ಟರ್ ಮುಂದುವರಿದಿರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಮೊದಲ ದಿನ ಸೋಮವಾರ ಮುಂಜಾನೆ 43 ವಿಷಯಗಳಿಗೆ ನಡೆದ ಪರೀಕ್ಷೆಗಳಿಗೆ 23,179ರಲ್ಲಿ 21,886 ವಿದ್ಯಾರ್ಥಿಗಳು ಹಾಜರಿದ್ದರು. 1,293 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಧ್ಯಾಹ್ನ 20 ವಿಷಯಗಳಿಗೆ ನಡೆದ ಪರೀಕ್ಷೆಗೆ 17,193 ವಿದ್ಯಾರ್ಥಿಗಳಲ್ಲಿ 16,691 ಮಂದಿ ಹಾಜರಾಗಿದ್ದರೆ, 502 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಮಂಗಳೂರು ವಿವಿ ಮೂಲಗಳು ತಿಳಿಸಿವೆ.

    ಕೋವಿಡ್‌ನಿಂದ ಬಾಧಿತರಾಗಿದ್ದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೋಣೆಯ ವ್ಯವಸ್ಥೆಯೊಂದಿಗೆ ಸರ್ಕಾರದ ನಿಯಮಾವಳಿಗೆ ಅನುಗುಣವಾಗಿ ಪರೀಕ್ಷೆ ನಡೆದಿದೆ. ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆ ನಡೆಸಲಾಗುವುದು ಎಂದು ವಿವಿ ತಿಳಿಸಿದೆ.
    ಕಳೆದ ಏಪ್ರಿಲ್‌ನಲ್ಲಿ ಪರೀಕ್ಷೆಗಳು ಆರಂಭಗೊಂಡಿದ್ದು ಕೋವಿಡ್ ಲಾಕ್‌ಡೌನ್ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts