ಪ್ರತ್ಯೇಕ ರಾಜ್ಯದ ಕೂಗಿಗೆ ಮೂಲ‌ ಕಾರಣ ಸಮ್ಮಿಶ್ರ ಸರ್ಕಾರ: ಕೋಟಾ ಶ್ರೀನಿವಾಸ ಪೂಜಾರಿ

ಹಾವೇರಿ: ಪ್ರತ್ಯೇಕ ರಾಜ್ಯದ ಕೂಗಿಗೆ ಮೂಲ‌ ಕಾರಣ ಸಮ್ಮಿಶ್ರ ಸರ್ಕಾರ ಎಂದು ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಡಿಸಿದ ಬಜೆಟ್​ನಲ್ಲಿ ಕೆಲವು ಜಿಲ್ಲೆಗಳಿಗೆ ಮಾತ್ರ ಹೆಚ್ಚು ಹಣ ಬಿಡುಗಡೆ ಮಾಡಿದ್ದೇ ಈ ಆಕ್ರೋಶಕ್ಕೆ ಕಾರಣ. ಪ್ರತ್ಯೇಕ ರಾಜ್ಯದ ಕೂಗಿಗೆ ಬಿಜೆಪಿ ಹೊಣೆಯಾಗಲು ಸಾಧ್ಯವಿಲ್ಲ ಎಂದರು.

ಪ್ರತ್ಯೇಕ ರಾಜ್ಯದ ಕೂಗಿಗೆ ಬಿಜೆಪಿ ಕಾರಣ ಅಲ್ಲ ಎಂಬುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರೇ ಹೇಳಿದ್ದಾರೆ. ಪ್ರತ್ಯೇಕತೆ ಬಗ್ಗೆ ಮಾತನಾಡಿದವರಿಗೆ ಅವರೇ ಬುದ್ಧಿ ಹೇಳಿದ್ದಾರೆ ಎಂದರು. (ದಿಗ್ವಿಜಯ ನ್ಯೂಸ್​)