More

  ಜೀತ ಪದ್ಧತಿ ನಿರ್ಮೂಲನೆಗೆ ಅರಿವು ಅಗತ್ಯ

  ಹೊಸಪೇಟೆ: ಜೀತ ಪದ್ಧತಿ ನಿರ್ಮೂಲನೆಗಾಗಿ ಜನರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಹೇಮಲತಾ ಬಿ.ಹುಲ್ಲೂರ ಹೇಳಿದರು.

  ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಕಂದಾಯ ಇಲಾಖೆ ಹಮ್ಮಿಕೊಂಡಿದ್ದ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

  ಇದನ್ನೂ ಓದಿ: ಜೀತ ಪದ್ಧತಿ ಬಗ್ಗೆ ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಿ

  ಜೀತ ಪದ್ಧತಿ ಎನ್ನುವುದು ಒಂದು ಅನಿಷ್ಟ ಪದ್ಧತಿಯಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಈಗಲೂ ಜೀವಂತವಾಗಿದೆ. ಜೀತ ಪದ್ಧತಿಯಿಂದ ಅಭಿವ್ಯಕ್ತಿ ಹಾಗೂ ಆರ್ಥಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ. ಆದ್ದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನ ಆಚರಿಸುವ ಮೂಲಕ ಅರಿವು ಮೂಡಿಸಬೇಕು ಎಂದು ತಿಳಿಸಿದರು.

  ಪ್ರಧಾನ ಸಿವಿಲ್ ನ್ಯಾಯಾಧೀಶ ಕಿಶನ್ ಬಿ.ಮಾಡಲಗಿ ಮಾತನಾಡಿ, ನಮಗೆ ಸ್ವಾತಂತ್ರ್ಯ ಸಿಕ್ಕು 75 ವರ್ಷವಾದರೂ ಜೀತ ಪದ್ಧತಿಯು ಇನ್ನೂ ಕೆಲವು ಕಡೆ ಜೀವಂತವಾಗಿದ್ದು, ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಿದೆ ಎಂದರು.

  ಎರಡನೇ ಅಪರ ಸಿವಿಲ್ ನ್ಯಾಯಾಧೀಶ ಸಂಜೀವ್ ಕುಮಾರ.ಜಿ ಮಾತನಾಡಿ, ಜೀತ ಪದ್ಧತಿಯನ್ನು ಕಾನೂನು ಅಡಿಯಲ್ಲಿ ನಿರ್ಮೂಲನೆ ಮಾಡಲಾಗಿದೆ. ಇದನ್ನು ಎಲ್ಲರೂ ತಿಳಿದುಕೊಳ್ಳಬೇಕು. ಇಂತಹ ಪದ್ಧತಿ ಎಲ್ಲಾದರೂ ಕಂಡು ಬಂದಲ್ಲಿ ನ್ಯಾಯಾಲಯಕ್ಕೆ ಅಥವಾ ಪೊಲೀಸ್ ಠಾಣೆಗೆ ದೂರು ನೀಡಬೇಕು ಎಂದರು.

  ತಹಸೀಲ್ದಾರ್ ಎಂ.ಎಂ.ಶ್ರುತಿ ಪ್ರತಿಜ್ಞಾವಿಧಿ ಬೋಧಿಸಿದರು. 3ನೇ ಅಪರ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಚೈತ್ರಾ.ಜೆ, ಜಿಲ್ಲಾ ಕಾರ್ಮಿಕಾಧಿಕಾರಿ ಸೂರಪ್ಪ ಡೊಂಬರ ಮತ್ತೂರ, ವಕೀಲರ ಸಂಘದ ಅಧ್ಯಕ್ಷ ಕೆ.ಪ್ರಹ್ಲಾದ್, ಪ್ರಧಾನ ಕಾರ್ಯದರ್ಶಿ ಪಿ.ಶ್ರೀನಿವಾಸ ಮೂರ್ತಿ, ಪಿಎಸ್‌ಐ ಮುನಿರತ್ನಂ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts