ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ : ಬಸ್ ಚಾಲಕಗೆ ಗಂಭೀರ ಗಾಯ

New Project (31)
Published on

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ಬೆಳಗ್ಗೆ ಸರಣಿ ಅಪಘಾತ ನಡೆದಿದ್ದು, ಕೆಎಸ್ಸಾರ್ಟಿಸಿ ಬಸ್ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಾಟಿಯ ಎರಡನೇ ತಿರುವಿನ ಬಳಿ ಕೊಟ್ಟಿಗೆಹಾರ ಕಡೆ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ, ಉಜಿರೆ ಕಡೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಗ್ಯಾಸ್ ಸಿಲಿಂಡರ್ ಲಾರಿಯ ಹಿಂಬದಿ ಬರುತ್ತಿದ್ದ ಇನ್ನೊಂದು ಲಾರಿ ಗ್ಯಾಸ್ ಸಿಲಿಂಡರ್ ಕೊಂಡೊಯ್ಯುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಿಂದ ಎರಡು ತಾಸು ಟ್ರಾಫಿಕ್ ಜಾಂ ಉಂಟಾಯಿತು. ವಾಹನ ಸವಾರರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಕೈಗೊಂಡರು. ಅಪಘಾತ ಸ್ಥಳದಲ್ಲಿ ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ ಮಾಹಿತಿ ತಿಳಿಸಲು ತಡವಾಯಿತು. ಭಾನುವಾರವಾದ ಕಾರಣ ಘಾಟಿ ಪರಿಸರದಲ್ಲಿ ಹೆಚ್ಚಿನ ವಾಹನ ಸಂಚಾರ ಇತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net