More

    ಸಮಸ್ಯೆ ನಿವಾರಣೆಗೆ ಸಮಿತಿ ರಚಿಸುವಂತೆ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಒತ್ತಾಯ

    ದೇವದುರ್ಗ: ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸರಣಿ ಆತ್ಮಹತ್ಯೆ ಹಾಗೂ ಕುಟುಂಬ ಸದಸ್ಯರ ಅಕಾಲಿಕ ಸಾವುಗಳ ಬಗ್ಗೆ ತನಿಖೆ ನಡೆಸಲು ನ್ಯಾಯಾಂಗ ಅಥವಾ ಸದನ ಸಮಿತಿ ರಚಿಸುವಂತೆ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟ ತಹಸೀಲ್ದಾರ್ ಮಧುರಾಜ್ ಯಾಳಗಿಗೆ ಶುಕ್ರವಾರ ಮನವಿ ಸಲ್ಲಿಸಿತು.

    ಅತಿಥಿ ಉಪನ್ಯಾಸಕರು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಬರೆಯುತ್ತಿದ್ದಾರೆ. ಆದರೆ, ಉಪನ್ಯಾಸಕರು ಮಾತ್ರ ಸಂಕಷ್ಟ ಜೀವನ ನಡೆಸುತ್ತಿದ್ದಾರೆ. ಗಣೇಕಲ್ ಗ್ರಾಮದ ಇಬ್ಬರು ಉಪನ್ಯಾಸಕರು ಅಕಾಲಿಕ ಮರಣ ಹೊಂದಿದ್ದರೆ, ಡಾ.ಅಮರೇಶ ಎನ್ನುವವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಮಂಡ್ಯದಲ್ಲಿ ಇಬ್ಬರು, ಗಂಗಾವತಿಯಲ್ಲಿ ಒಬ್ಬರು ಸೇರಿ ಏಳಕ್ಕೂ ಹೆಚ್ಚು ಜನ ಮರಣ ಹೊಂದಿದ್ದಾರೆ. ಕಡಿಮೆ ವೇತನ, ಅಭದ್ರತೆ, ಸೇರಿ ವಿವಿಧ ಕಾರಣದಿಂದ ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಆದರೆ, ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಸಾವಿನ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.

    ಮೃತಪಟ್ಟ ಉಪನ್ಯಾಸಕರ ಕುಟುಂಬಕ್ಕೆ 10ಲಕ್ಷ ರೂ. ಪರಿಹಾರ ನೀಡಬೇಕು. ಲಾಕ್‌ಡೌನ್ ಅವಧಿ ಸೇರಿ ಪೂರ್ಣ ಪ್ರಮಾಣದ ವೇತನ ನೀಡಬೇಕು. ಉದ್ಯೋಗ ಭದ್ರತೆ ನೀಡಿ, ವೈದ್ಯಕೀಯ, ಪಿಎಫ್ ಸೌಲಭ್ಯ ಕಲ್ಪಿಸಬೇಕು. ಅನಗತ್ಯ ನಿಯೋಜನೆ ತಡೆಯಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷ ಚಂದ್ರಶೇಖರ ಅಕ್ಕರಕಿ, ಎಚ್.ಡಿ.ಶಿವರಾಜ, ಮುನಿಯಪ್ಪ ನಾಗೋಲಿ, ನರಸಪ್ಪ ಪಾಟೀಲ್, ರಮೇಶ ರಾಮನಾಳ, ಡಾ.ಸುಮಂಗಲಾ, ವೀಣಾ, ವಿಜಯಕುಮಾರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts