Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

ಭಾರತದಲ್ಲೊಂದು ಗಂಭೀರ ಸಮಸ್ಯೆ ಇದೆ: ವಿದೇಶದಲ್ಲಿ ರಾಹುಲ್‌ ಗಾಂಧಿ

Tuesday, 09.01.2018, 8:17 PM       No Comments

ನವದೆಹಲಿ: ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ವಿದೇಶದಲ್ಲಿ ಮಾತನಾಡಿ ಭಾರತದಲ್ಲಿ ಗಂಭೀರ ಸಮಸ್ಯೆಯಿದೆ ಎನ್ನುವ ಮೂಲಕ ಮತ್ತೊಮ್ಮೆ ವಿವಾದಿತ ಹೇಳಿಕೆ ನೀಡಿದ್ದಾರೆ.

ಬಹರೈನ್‌ ನಲ್ಲಿ ಆಯೋಜಿಸಿದ್ದ ಸುಮಾರು 50 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದ ಅನಿವಾಸಿ ಭಾರತೀಯರ ಜಾಗತಿಕ ಸಮಾವೇಶದಲ್ಲಿ ಮಾತನಾಡಿ, ನಾನಿಲ್ಲಿಗೆ ಆಗಮಿಸಿರುವುದು ಭಾರತದಲ್ಲಿ ಒಂದು ಗಂಭೀರವಾದ ಸಮಸ್ಯೆಯಿರುವುದನ್ನು ಹಾಗೂ ದೇಶಕ್ಕೆ ನೀವೆಷ್ಟು ಮುಖ್ಯ ಎನ್ನುವುದನ್ನು ತಿಳಿಸಲು. ನೀವು ಆ ಸಮಸ್ಯೆಯ ಒಂದು ಭಾಗವಾಗಿದ್ದು, ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ಭಾರತ ಮತ್ತು ನಿಮ್ಮ ನಡುವೆ ಕೊಂಡಿಯನ್ನು ನಾನು ನಿರ್ಮಿಸುತ್ತೇನೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಹಲವಾರು ಸಮಸ್ಯೆಗಳಿದ್ದು, ಯುವಕರನ್ನು ಮುಂದಿಟ್ಟುಕೊಂಡು ಬಿಜೆಪಿ ಲಾಭ ಪಡೆಯಲು ಯತ್ನಿಸುತ್ತಿದೆ. ಜಾತಿ ಮತ್ತು ಧರ್ಮದ ಆಧಾರದಲ್ಲಿ ಜನರನ್ನು ಒಡೆದು ಆಳುತ್ತಿದೆ. ಈ ಮೂಲಕ ನಿರುದ್ಯೋಗಿ ಯುವಕರನ್ನು ಮುಂದಿಟ್ಟು ಸಮುದಾಯಗಳ ನಡುವೆ ಧ್ವೇಷವನ್ನು ಬಿತ್ತುತ್ತಿದೆ ಎಂದು ಆರೋಪಿಸಿದರು.

ಮುಂಬರುವ ಆರು ತಿಂಗಳಿನಲ್ಲಿ ಕಾಂಗ್ರೆಸ್‌ ಬದಲಾವಣೆ ಕಾಣಲಿದ್ದು, ಹೊಸ ಮಿನುಗುವ ಪಕ್ಷವಾಗಿ ಬೆಳೆಯಲಿದೆ. ಉದ್ಯೋಗ ಸೃಷ್ಟಿ, ಉತ್ತಮ ಆರೋಗ್ಯ ಮತ್ತು ಶೈಕ್ಷಣಿಕ ವ್ಯವಸ್ಥೆಯ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top