ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅಮೂಲ್ಯ: ಮೇಲ್ವಿಚಾರಕಿ ರೇವತಿ ಅನಿಸಿಕೆ

anganavadi
ಬೆಳ್ವೆ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಜಲಜಾ ಟೀಚರ್ ಬೆಳ್ವೆ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು
Published on

ಬೆಳ್ವೆ: ಬಾಲ್ಯದ ದಿನಗಳಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ, ಶಿಸ್ತು, ಉತ್ತಮ ಸಂಸ್ಕಾರ ಮೂಡಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅಮೂಲ್ಯವಾದದ್ದು, ಈ ನಿಟ್ಟಿನಲ್ಲಿ ಅವರ ಸೇವೆ ಗುರುತಿಸಿ ಗೌರವಿಸುವುದು ಶ್ರೇಷ್ಠ ಕಾರ್ಯ ಎಂದು ಬೆಳ್ವೆ ವಲಯ ಅಂಗನವಾಡಿ ಮೇಲ್ವಿಚಾರಕಿ ರೇವತಿ ಹೇಳಿದರು.

ಬೆಳ್ವೆ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಜಲಜಾ ಟೀಚರ್ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಶಶಿಕಲಾ ಅಲ್ಸೆ ಸೆಟ್ಟೋಳಿ, ಪತ್ರಕರ್ತ ಕೆ.ಸಂಜೀವ ಆರ್ಡಿ, ಬೆಳ್ವೆ ವಲಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹೆಂಗವಳ್ಳಿ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ ಸ್ವಾಗತಿಸಿದರು. ನಿವೃತ್ತ ಕಾರ್ಯಕರ್ತೆ ಶಶಿಕಲಾ ಅಲ್ಸೆ ಸೆಟ್ಟೋಳಿ ಪ್ರಾರ್ಥಿಸಿದರು. ತೊಂಬತ್ತು ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಶಾಂತಾ ಸನ್ಮಾನ ಪತ್ರ ವಾಚಿಸಿದರು. ಪವಿತ್ರಾ ಬೆಳ್ವೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net