ಬ್ರಹ್ಮಾವರದಲ್ಲಿ ಸರ್ವಿಸ್ ರಸ್ತೆ ಕಾಮಗಾರಿಗೆ ಚಾಲನೆ

bmr
Published on

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರದಲ್ಲಿ ಅಪಘಾತಗಳು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆ ಬಳಿಯ ಬಸ್ ನಿಲ್ದಾಣ ಮತ್ತು ಆಕಾಶವಾಣಿ ವೃತ್ತದ ತನಕ ಪ್ಲೈಓವರ್ ಹಾಗೂ ಸರ್ವಿಸ್ ರಸ್ತೆ ನಿರ್ಮಾಣ ಮಾಡಬೇಕೆಂಬ ಸಾರ್ವಜನಿಕರ ಬೇಡಿಕೆ ಈಡೇರಿದ್ದು, ಶುಕ್ರವಾರ ಕಾಮಗಾರಿ ಆರಂಭಗೊಂಡಿದೆ.

ಕೆಲವು ವರ್ಷದಿಂದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿಯ ಪ್ರಾಣಕ್ಕೆ ಕಂಟವಾಗಿ ಪರಿಣಮಿಸಿದ್ದ ಈ ಸ್ಥಳದಲ್ಲಿ ಸರ್ವಿಸ್ ರಸ್ತೆ, ಫ್ಲೈಓವರ್ ನಿರ್ಮಿಸಬೇಕೆಂದು ವಿವಿಧ ಸಂಘ ಸಂಸ್ಥೆಗಳಿಂದ ನಿರಂತರವಾಗಿ ಧರಣಿ ಮುಷ್ಕರ ನಡೆಸಲಾಗಿತ್ತು. ಕಾಮಗಾರಿ ಆರಂಭಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಹೆದ್ದಾರಿ ಇಲಾಖೆಗೆ ಅಂತಿಮ ಗಡುವು ನೀಡಲಾಗಿತ್ತು. ಇದೀಗ ಕಾಮಗಾರಿ ಆರಂಭಗೊಂಡಿದ್ದು ಹೋರಾಟ ಸಮಿತಿಗೆ ಒಂದು ಹಂತದ ಗೆಲುವು ಸಿಕ್ಕಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net