More

    ಸೇವೆ ಕಾಯಂಗೊಳಿಸಲು ಅತಿಥಿ ಉಪನ್ಯಾಸಕರ ಒತ್ತಾಯ

    ಅಥಣಿ: ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಹಾಗೂ ಕಾಯಂ ಮಾಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಉಪತಹಸೀಲ್ದಾರ್ ರಾಜು ಬುರ್ಲಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

    ರಾಜ್ಯದ ಪ್ರಥಮ ದರ್ಜೆ ಕಾಲೇಜ್‌ಗಳಲ್ಲಿ ಹತ್ತು-ಇಪ್ಪತ್ತು ವರ್ಷಗಳಿಂದ ಕಡಿಮೆ ಗೌರವಧನ ಪಡೆದು ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ನಮಗೆ ಸರ್ಕಾರ ನ್ಯಾಯಯುತ ಬೇಡಿಕೆಗಳಾದ ಸೇವೆ ಕಾಯಂಗೊಳಿಸಿವುದು, ಕನಿಷ್ಠ ವೇತನ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಿದರು ಪ್ರಯೊಜನವಾಗಿಲ್ಲ. ಆದಷ್ಟು ಬೇಗ ನಮ್ಮ ಬೇಡಿಕೆಗಳನ್ನು ಈಡೆರಿಸಬೇಕು ಎಂದು ಅಥಣಿ ಸರ್ಕಾರಿ ಪ್ರಥಮ ದರ್ಜೆ ಅತಿಥಿ ಉಪನ್ಯಾಸಕರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಹಲವು ವರ್ಷಗಳಿಂದ ಕಡಿಮೆ ಸಂಬಳದಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಈವರೆಗೆ ಸೇವಾ ಭದ್ರತೆ ಹಾಗೂ ಕಾಯಂ ಕುರಿತು ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರ ಶೀಘ್ರವಾಗಿ ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

    ಡಾ. ಮಹಾಂತೇಶ ಉಕ್ಕಲಿ, ಆರ್.ಎ. ಬಡಿಗೇರ, ಎನ್.ಬಿ. ಗಂಗಣ್ಣವರ, ಎಸ್.ಎಸ್. ದೇವರೆಡ್ಡಿ, ಎಂ.ಬಿ. ಸಲಗರೆ, ಬಿ.ಎಸ್.ಪಾಟೀಲ, ಎಸ್.ಎಂ. ತಕತರಾವ, ಅಕ್ಷತಾ ಬಿಜಾಪುರ, ಭಾಗ್ಯಶ್ರೀ ಸಂಖ, ಅಕ್ಷತಾ ಮಮದಾಪುರ, ಎಸ್.ಎಸ್.ಪಾಟೀಲ, ಆರ್.ಎಸ್. ಹಳ್ಳೂರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts