More

    ಪ್ರತಿಫಲ ನಿರೀಕ್ಷಿಸದೆ ಸೇವೆ ರೋಟರಿ ಧ್ಯೇಯ

    ಪಿರಿಯಾಪಟ್ಟಣ: ಪ್ರತಿಫಲವನ್ನು ನಿರೀಕ್ಷಿಸದೆ ಸೇವೆ ಮಾಡುವುದು ರೋಟರಿಯ ಧ್ಯೇಯವಾಗಿದೆ ಎಂದು ರೋಟರಿ 3181 ಜಿಲ್ಲಾ ಪ್ರಾಂತಪಾಲ ಎಚ್.ಆರ್.ಕೇಶವ್ ತಿಳಿಸಿದರು.

    ರೋಟರಿ ಪಿರಿಯಾಪಟ್ಟಣ ಐಕಾನ್ಸ್ ಸಂಸ್ಥೆಗೆ ಜಿಲ್ಲಾ ಪ್ರಾಂತಪಾಲ ಅಧಿಕೃತ ಭೇಟಿ ಹಿನ್ನೆಲೆಯಲ್ಲಿ ಮಂಗಳವಾರ ತಾಲೂಕಿನ ಸತ್ಯಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಲೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಯಂತ್ರ ವಿತರಿಸಿ ಮಾತನಾಡಿದರು.

    ರೋಟರಿ ಸಂಸ್ಥೆಯು ಶಿಕ್ಷಣ, ಆರೋಗ್ಯ, ಪರಿಸರ ಕ್ಷೇತ್ರ ಸೇರಿದಂತೆ ಹಲವು ಆಯಾಮಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಇಂದು ಭಾರತ ಸೇರಿದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಪೋಲಿಯೋ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದರೆ ಅದಕ್ಕೆ ರೋಟರಿ ಸಂಸ್ಥೆಯ ಕೊಡುಗೆ ಮಹತ್ವದ್ದಾಗಿದೆ ಎಂದರು.

    ಹಲವು ಸರ್ಕಾರಿ ಶಾಲೆಗಳಲ್ಲಿ ಸಂಪನ್ಮೂಲಗಳ ಕೊರತೆ ಎದ್ದು ಕಾಣುತ್ತಿದ್ದು, ಎಲ್ಲವನ್ನೂ ಸರ್ಕಾರದಿಂದಲೇ ನಿರೀಕ್ಷಿಸುವುದನ್ನು ಬಿಟ್ಟು ಸಂಘ ಸಂಸ್ಥೆಗಳ ನೆರವಿಗಾಗಿಯೂ ಮನವಿ ಸಲ್ಲಿಸುವಂತೆ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಸರಿ ಸಮನಾಗಿ ಪ್ರಬುದ್ಧರಾಗುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.

    ರೋಟರಿ ಪಿರಿಯಾಪಟ್ಟಣ ಐಕಾನ್ಸ್ ಅಧ್ಯಕ್ಷ ಕೆ.ರಮೇಶ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಚಟುವಟಿಕೆಗಳು ಉತ್ತಮವಾಗಿರಬೇಕೆಂಬ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಕಾರ್ಯೋನ್ಮುಖವಾಗಿದೆ ಎಂದರು.

    ಸತ್ಯಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಯಂತ್ರವನ್ನು ಕೊಡುಗೆಯಾಗಿ ನೀಡಿದ ರೋಟರಿ ಸಂಸ್ಥೆಯ ಸದಸ್ಯ ಎಸ್.ಕೆ.ಸುನೀಲ್ ಸೇವೆ ಶ್ಲಾಘನೀಯ ಎಂದರು.

    ರೋಟರಿ ವಲಯ 6ರ ಸಹಾಯಕ ಪ್ರಾಂತಪಾಲ ಡಿ.ಎಂ.ತಿಲಕ್, ಜೋನಲ್ ಲೆಫ್ಟಿನೆಂಟ್ ಎಂ.ಕೆ.ಮಾಚಯ್ಯ, ರೋಟರಿ ಪಿರಿಯಾಪಟ್ಟಣ ಐಕಾನ್ಸ್ ಸಂಸ್ಥೆಯ ಕಾರ್ಯದರ್ಶಿ ಪಿ.ಎಸ್.ಹರೀಶ್, ಖಜಾಂಚಿ ಬಿ.ಆರ್.ಗಣೇಶ್, ಸದಸ್ಯ ಜೆ.ಎಸ್.ನಾಗರಾಜ್, ಸಿ.ಎನ್.ವಿಜಯ್, ಎಸ್.ರಮೇಶ್, ಬಿ.ಎಸ್.ಪ್ರಸನ್ನ, ಎಸ್.ಎಲ್.ರವಿಕುಮಾರ್, ಬಿ.ಎಸ್.ಸತೀಶ್ ಆರಾಧ್ಯ, ಎಸ್.ಕೆ.ಸುನೀಲ್, ಮುಖ್ಯಶಿಕ್ಷಕ ಶಿವಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ್, ಶಿಕ್ಷಕ ಪ್ರಭಾಕರ್, ಮನುಕುಮಾರಿ, ಶಿಲ್ಪಾ, ಆಶಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts