More

    ಮಕ್ಕಳಿಗಾಗಿ ಅಲ್ಪ ಸಮಯ ಮೀಸಲಿಡಿ

    ಮುಧೋಳ: ಪಾಲಕರು ತಮ್ಮ ಮಕ್ಕಳಿಗಾಗಿ ಅಲ್ಪಸಮಯ ಮೀಸಲಿಟ್ಟು ಅವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಬೇಕೆಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದರು.

    ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮನಾಥ ಅಂತಾರಾಷ್ಟ್ರೀಯ ಸಿಬಿಎಸ್‌ಇ ಶಾಲೆ ಹಾಗೂ ಶ್ರೀ ಸಂಗಮನಾಥ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಾರ್ಷಿಕೋತ್ಸವ ನಿಮಿತ್ತ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಸಂಗಮೋತ್ಸವ-24 ಸಾಂಸ್ಕೃತಿ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಸಮಾಜದ ಕೊನೆಯ ಪ್ರಜೆಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಆರಂಭಿಸಿದ ಶಿಕ್ಷಣ ಸಂಸ್ಥೆ ಕೊಟ್ಟ ಮಾತಿನಂತೆಯೇ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದರು.

    ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೆ. ನಂದನೂರ ಮಾತನಾಡಿ, ಜೀವನಾವಶ್ಯಕ ಶಿಕ್ಷಣದಿಂದ ನಿರಂತರ ಶೇ. 100 ರಷ್ಟು ಲಿತಾಂಶ ಸಾಧಿಸುವ ಜತೆಗೆ ಈ ಭಾಗದ ಬಡವರ, ಮಧ್ಯಮ ವರ್ಗದವರ ನಾಡಿಮಿಡಿತದಂತೆ ಕಾರ್ಯ ನಿರ್ವಹಿಸುತ್ತಿರುವ ಜಿಪಂ ಮಾಜಿ ಅಧ್ಯಕ್ಷ ಶಿವಕುಮಾರ ಮಲಘಾಣ ನೇತೃತ್ವದ ಈ ಸಂಸ್ಥೆಯಲ್ಲಿ ನುರಿತ ಶಿಕ್ಷಕರಿದ್ದಾರೆ ಎಂದರು.

    ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಶಿವಕುಮಾರ ಮಲಘಾಣ ಮಾತನಾಡಿ, ನಮ್ಮ ಶಾಲೆಯಲ್ಲಿ ಇಂದಿನ ವಿದ್ಯಾರ್ಥಿಗಳಿಗೆ ಬೇಕಾದ ಶಿಕ್ಷಣ ಹಾಗೂ ಕಲಿಕೋಪಕರಣಗಳನ್ನು ನೀಡುತ್ತ ಗುಣಮಟ್ಟದ ಶಿಕ್ಷಣದಿಂದ ಉತ್ತಮ ಲಿತಾಂಶ ಕೊಟ್ಟಿದೆ. ಏಳು ಮಕ್ಕಳಿಂದ ಪ್ರಾರಂಭವಾದ ಸಂಸ್ಥೆ ಇಂದು ಎರಡು ಸಾವಿರಕ್ಕೆ ಮುಟ್ಟಿದೆ. ಈ ನಿಟ್ಟಿನಲ್ಲಿ ಬರುವ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಕಟ್ಟಡ ನಿರ್ಮಾಣವಾಗಿ ಲೋಕಾರ್ಪಣೆಯಾಗಲಿದೆ ಎಂದರು.

    ಪ್ರಾಚಾರ್ಯ ಡಾ.ಎಸ್. ಖಾನ್, ಮುಖ್ಯಶಿಕ್ಷಕ ವೆಂಕಟೇಶ ಗುಡೆಪ್ಪನವರ ವಾರ್ಷಿಕ ವರದಿ ಮಂಡಿಸಿದರು. ಸಿಪಿಐ ಆರ್.ಆರ್. ಪಾಟೀಲ, ಕಾನಿಪ ಸಂಘದ ಅಧ್ಯಕ್ಷ ಬಿ. ರತ್ನಾಕರಶೆಟ್ಟಿ, ಕಾರ್ಯಾಧ್ಯಕ್ಷ ಶಿಶಿರ ಮಲಘಾಣ, ನಗರಸಭೆ ಸದಸ್ಯ ಡಾ. ಸತೀಶ ಮಲಘಾಣ, ಪತ್ರಕರ್ತ ಉದಯ ಕುಲಕರ್ಣಿ, ಆಡಳಿತಾಧಿಕಾರಿ ಮಲ್ಲು ಕಳ್ಳೆನ್ನವರ ಇತರರಿದ್ದರು.

    ನೂತನ ಕಟ್ಟಡದ ತ್ರಿಡಿ ವಿಡಿಯೋವನ್ನು ಎಸ್‌ಪಿ ಅಮರನಾಥ ರೆಡ್ಡಿ ಬಿಡುಗಡೆಗೊಳಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts