More

    ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸ್ಥಾಪಿಸಿ

    ಶಿವಮೊಗ್ಗ: ಮಲೆನಾಡಿನ ಮೂರ್ನಾಲ್ಕು ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಬೆಳೆಸುವ ದೃಷ್ಟಿಯಿಂದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅಭಿಪ್ರಾಯಪಟ್ಟರು.

    ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಜೆಟ್ ಹಿನ್ನೆಲೆಯಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಅನುದಾನ ಮೀಸಲಿಡಬೇಕು ಎಂದರು.
    ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನ ಕಾರ್ಯಾಚರಣೆಗೆ ಪೂರಕ ವ್ಯವಸ್ಥೆ ಕಲ್ಪಿಸಬೇಕು. ಶಿವಮೊಗ್ಗ-ದಾವಣಗೆರೆ- ಚಿತ್ರದುರ್ಗ ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ಬೀರೂರು-ಶಿವಮೊಗ್ಗ ರೈಲ್ವೆ ಮಾರ್ಗದ ಡಬ್ಲಿಂಗ್ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
    ತಾಳಗುಪ್ಪ-ಹುಬ್ಬಳ್ಳಿ ಹಾಗೂ ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗಕ್ಕೆ ಅನುದಾನ ನೀಡಬೇಕು. ಇ-ತ್ಯಾಜ್ಯ ನಿರ್ವಹಣೆಗೆ ಎಲ್ಲ ಜಿಲ್ಲೆಗಳಲ್ಲಿ ಜಾಗ ಮೀಸಲಿಡಬೇಕು. ಅದನ್ನು ಅಲ್ಲಿನ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಮೂಲಕ ನಿರ್ವಹಣೆ ಮಾಡಲು ಅವಕಾಶ ನೀಡಬೇಕು. ಉದ್ಯೋಗ ಸೃಷ್ಠಿಗೆ ಹೆಚ್ಚಿನ ಕೆರಿಯರ್ ಪಾರ್ಕ್ ನಿರ್ಮಿಸಬೇಕೆಂದರು.
    ಸಂಘದ ತೆರಿಗೆ ಸಲಹಾ ಸಮಿತಿ ಅಧ್ಯಕ್ಷ ಇ.ಪರಮೇಶ್ವರ್ ಮಾತನಾಡಿ, ತೆರಿಗೆಗೆ ಸಂಬಂಧಿಸಿದ ನೀತಿಗಳನ್ನು ಸರಳಗೊಳಿಸಬೇಕು ಎಂದರು. ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts