More

    ಸಂತ ಸೇವಾಲಾಲ್ ಭಾವಚಿತ್ರ ಅದ್ದೂರಿ ಮೆರವಣಿಗೆ

    ಹೊಸಪೇಟೆ: ಬಂಜಾರ ಸಮಾಜದವರು ಹೊಟ್ಟೆ ಪಾಡಿಗಾಗಿ ಊರಿಂದ ಊರಿಗೆ ವಲಸೆ ಹೋಗುವ ಪ್ರವೃತ್ತಿ ನಿಲ್ಲಿಸಿ ಮಕ್ಕಳ ಭವಿಷ್ಯತ್ತಿಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ಆರ್.ರಾಮಜಿನಾಯ್ಕ ಅಭಿಪ್ರಾಯ ವ್ಯಕ್ತಪಡಿಸಿದರು.

    ಸಂತ ಸೇವಾಲಾಲ್ ಮಹಾರಾಜರ ಜಯಂತ್ಯುತ್ಸವದ ನಿಮಿತ್ತ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದಿಂದ ನಗರದ ಸಣ್ಣಕ್ಕಿ ವೀರಭದ್ರೇಶ್ವರ ದೇಗುಲದ ಮುಂದೆ ಗುರುವಾರ ಭಾವಚಿತ್ರ ಮೆರವಣಿಗೆ ಚಾಲನೆ ನೀಡಿ ಮಾತನಾಡಿದರು.

    ಸಣ್ಣಕ್ಕಿ ವೀರಭದ್ರೇಶ್ವರ ದೇಗುಲದಿಂದ ಆರಂಭವಾದ ಮೆರವಣಿಗೆ, ವಾಲ್ಮೀಕಿ ವೃತ್ತ, ಮದಕರಿ ನಾಯಕ ವೃತ್ತ, ದೊಡ್ಡ ಮಸೀದಿ, ಗಾಂಧಿಚೌಕು, ಸಂಗೊಳ್ಳಿ ರಾಯಣ್ಣ ವೃತ್ತ, ಕೇಂದ್ರ ಬಸ್‌ನಿಲ್ದಾಣ, ಡಾ.ಪುನೀತ್ ರಾಜ್‌ಕುಮಾರ್ ವೃತ್ತ, ಅಂಬೇಡ್ಕರ್ ವೃತ್ತ, ಕಾಲೇಜು ರಸ್ತೆ ಮೂಲಕ ಒಳಾಂಗಣ ಕ್ರೀಡಾಂಗಣದಲ್ಲಿ ಸಮಾವೇಶಗೊಂಡಿದ್ದರು.

    ಮೆರವಣಿಗೆಯಲ್ಲಿ ಬಂಜಾರ ಸಮಾಜದ ಸಾಂಪ್ರದಾಯಿಕ ವಾದ್ಯ ಮೇಳಗಳು, ಕಲಾತಂಡ ಮೆರವಣಿಗೆಯ ಮೆರುಗು ಹೆಚ್ಚಿಸಿದವು. ಯುವತಿಯರು ಹಾಗೂ ಮಹಿಳೆಯರು ಸಾಂಪ್ರದಾಯಿಕ ಲಂಬಾಣಿ ದಿರಿಸಿನಲ್ಲಿ ನೃತ್ಯ ಮಾಡಿದರು. ಯುವಕರು, ಡಿಜೆ ಸಂಗೀತಕ್ಕೆ ಮನಸೋತು ಕುಣಿದು ಕುಪ್ಪಳಿಸಿದರು. 

    ಕೊಟ್ಟೂರಿನ ಬಂಜಾರ ಶ್ರೀ ಶಕ್ತಿ ಪೀಠದ ಶಿವಪ್ರಕಾಶ್ ಸ್ವಾಮಿ ಸಾನಿಧ್ಯ ವಹಿಸಿದರು. ಸಂಘದ ಜಿಲ್ಲಾಧ್ಯಕ್ಷ ಡಿ.ಲಾಲ್ಯನಾಯ್ಕ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts