More

    8ನೇ ತರಗತಿ ವಿದ್ಯಾರ್ಥಿನಿ ಕೆ.ಆರ್.ಸೇವಂತಿ ಭದ್ರಾವತಿ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ

    ಭದ್ರಾವತಿ: ತಾಲೂಕು 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸತ್ಯಸಾಯಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕೆ.ಆರ್.ಸೇವಂತಿ ಆಯ್ಕೆಯಾಗಿದ್ದು ಭದ್ರಾ ಪ್ರೌಢಶಾಲೆಯ 9ನೇ ತರಗತಿಯ ಸಿಂಚನಾ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್.ಸುಧಾಮಣಿ ಹೇಳಿದರು.

    ಜ.2ರಂದು ನ್ಯೂಟೌನ್‌ನ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಆವರಣದಲ್ಲಿ ಸಾಹಿತ್ಮ ಸಮ್ಮೇಳನ ನಡೆಯಲಿದ್ದು, ಬೆಳಗ್ಗೆ 10ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದೆ. 9.30ಕ್ಕೆ ಧ್ವಜಾರೋಹಣ ನೆರವೇರಲಿದೆ. ರಾಷ್ಟ್ರಧ್ವಜವನ್ನು ಪ್ರಶಾಂತಿ ಸೇವಾ ಟ್ರಸ್ಟ್ ಜಂಟಿ ಕಾರ್ಯದರ್ಶಿ ಶಿವಪ್ಪ, ನಾಡಧ್ವಜವನ್ನು ಪಿಎಸ್‌ಐ ಶಾಂತಲಾ, ಕನ್ನಡಧ್ವಜವನ್ನು ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್.ಸುಧಾಮಣಿ ನೆರವೇರಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಮುಖ್ಯ ಅತಿಥಿಗಳಾಗಿ ಶಾಸಕ ಬಿ.ಕೆ.ಸಂಗಮೇಶ್ವರ್, ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್, ಬಿಇಒ ಎ.ಕೆ.ನಾಗೇಂದ್ರಪ್ಪ, ಪ್ರಶಾಂತಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಡಿ.ಪ್ರಭಾಕರ ಬೀರಯ್ಯ, ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ್, ಕಸಾಪ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬಿ.ಸಿದ್ದಬಸಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.
    ಕವಿಗೋಷ್ಠಿ, ಕಥಾಗೋಷ್ಠಿ, ಪ್ರಚಲಿತ ವಿದ್ಯಾಮಾನಗಳು ಕುರಿತಂತೆ ಸಾಹಿತ್ಯ ಚಟುವಟಿಕೆಗಳು ನಡೆಯಲಿವೆ. ಸಂಜೆ 4ಕ್ಕೆ ನಡೆಯುವಸ ಮಾರೋಪ ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷೆ ಶ್ರುತಿ ವಸಂತಕುಮಾರ್, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಪಂಚಾಕ್ಷರಿ, ಉದ್ಯಮಿ ಬಿ.ಕೆ.ಜಗನ್ನಾಥ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಎಲ್ಲ ಕಾರ್ಯಕ್ರಮಗಳನ್ನು ಮಕ್ಕಳೇ ನಡೆಸಿಕೊಡಲಿದ್ದಾರೆ ಎಂದು ಹೇಳಿದರು.
    ವೇದಿಕೆ ಪ್ರಮುಖರಾದ ಕೋಡ್ಲು ಯಜ್ಞಯ್ಯ, ಜೆ.ಉಮಾಪತಿ, ಗಂಗರಾಜ್, ಬಿ.ಕಾಂತಪ್ಪ, ತಿಪ್ಪಮ್ಮ, ಎಚ್.ತಿಮ್ಮಪ್ಪ, ಬಿ.ಎಸ್.ಪ್ರಕಾಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts