More

    ಪ್ರಣಬ್​ ನಿಧನಕ್ಕೆ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ

    ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದೆ.

    ದೇಶದ ಮುತ್ಸದ್ಧಿಯ ನಿಧನಕ್ಕೆ ದೇಶಾದ್ಯಂತ ಏಳು ದಿನಗಳವರೆಗೆ ಶೋಕಾಚರಣೆ ಮಾಡಲಾಗುತ್ತದೆ. ಆಗಸ್ಟ್​ 31ರಿಂದ ಸೆಪ್ಟಂಬರ್​ 6ರ ವರೆಗೆ (ಎರಡೂ ದಿನಗಳು ಸೇರಿ) ಈ ಶೋಕಾಚರಣೆ ಜಾರಿಯಲ್ಲಿರಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

    ಈ ನಿಮಿತ್ತ ದೇಶದೆಲ್ಲೆಡೆ ಸರ್ಕಾರಿ ಕಚೇರಿ, ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಈ ಅವಧಿಯಲ್ಲಿ ಸಾರ್ವಜನಿಕ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯದಲ್ಲೂ ಕೂಡ ಇದೇ ನಿಯಮ ಪಾಲನೆಯಾಗಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಮೊಹಮ್ಮದ್ ನಯೀಮ್​ ಮೊಮಿನ್​ ತಿಳಿಸಿದ್ದಾರೆ.

    ಪಶ್ಚಿಮ ಬಂಗಾಳದ ಲಿಟಲ್​ ಮಾಸ್ಟರ್​ ಆಗಿದ್ದರು ಪ್ರಣಬ್​ ದಾ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts