

ಜಮ್ಮು ಮತ್ತು ಕಾಶ್ಮೀರ: ಪವರ್ ಪ್ರಾಜೆಕ್ಟ್ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವಾಹನವೊಂದು ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಿಶ್ತ್ವಾರದಲ್ಲಿ ನಡೆದಿದೆ.
ದಂಗದೂರು ಪವರ್ ಪ್ರಾಜೆಕ್ಟ್‌ನ 10 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ದಂಗದೂರು ಅಣೆಕಟ್ಟಿನ ಬಳಿ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಅಪಘಾತವನ್ನು ದೃಢೀಕರಿಸಿದ ಕಿಶ್ತ್ವಾರ್ ಪೊಲೀಸರು, ಕ್ರೂಸರ್ ವಾಹನವು ಕಣಿವೆಯಲ್ಲಿ ಬಿದ್ದಿದೆ, ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ. ವಾಹನ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಸಾವು-ನೋವು ಸಂಭವಿಸಿದೆ.
' ಈ ಸ್ಥಳದಲ್ಲಿ ಹೆಚ್ಚಾಗಿ ಅಪಘಾತ ಸಂಭವಿಸುತ್ತದೆ. ಚಾಲಕ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ' ಎಂದು ಪೊಲೀಸ್ ಅಧಿಕರಿಯೊಬ್ಬರು ತಿಳಿಸಿದ್ದಾರೆ.