More

    ಮಣಿಪುರದಲ್ಲಿ ಭೀಕರ ಭೂ ಕುಸಿತ: 7 ಸಾವು, ಸೇನಾ ಸಿಬ್ಬಂದಿ ಸೇರಿ 45ಮಂದಿ ನಾಪತ್ತೆ

    ಇಂಫಾಲ: ಮಣಿಪುರದಲ್ಲಿ ಸಂಭವಿಸಿದ ಭಾರೀ ಭೀಕರ ಭೂಕುಸಿತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಭಾರತೀಯ ಸೇನಾ ಸಿಬ್ಬಂದಿ ಸೇರಿದಂತೆ 45 ಮಂದಿ ನಾಪತ್ತೆಯಾಗಿದ್ದಾರೆ.

    ನೋನಿ ಜಿಲ್ಲೆಯ ತುಪುಲ್​ ರೈಲು ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದ್ದು, ನಾಪತ್ತೆಯಾದವರಿಗಾಗಿ ಶೋಧಕಾರ್ಯ ಮುಂದುವರಿಸಲಾಗಿದೆ. ಈವರೆಗೆ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ.

    ಜಿರಿಬಾಮ್‌ನಿಂದ ರಾಜಧಾನಿ ಇಂಫಾಲ್‌ಗೆ ರೈಲು ಮಾರ್ಗ ನಿರ್ಮಾಣ ಹಿನ್ನಲೆ ಪ್ರಾದೇಶಿಕ ಸೇನಾ ಶಿಬಿರ ಅಲ್ಲಿ ರಕ್ಷಣೆಗೆ ನಿಂತಿತ್ತು. ಇದೇ ವೇಳೆ ಭೂ ಕುಸಿತ ಸಂಭವಿಸಿದೆ. ಹೆಚ್ಚಿನ ಜನರು ಅವಶೇಷಗಳಡಿಯಲ್ಲಿ ಸಿಲುಕಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

    ಅವಶೇಷಗಳಡಿ ಸಿಲುಕಿದ್ದ 13ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ, ಇನ್ನುಳಿದವರ ಶೋಧ ನಡೆಯುತ್ತಿದೆ ಎಂದು ನೋನಿ ಜಿಲ್ಲೆಯ ಎಸ್​ಡಿಒ ನೊಲೊಮನ್​ ಎಲ್​ ಫಿಮೇಟ್​ ತಿಳಿಸಿದ್ದಾರೆ.

    ಘಟನೆ ಕುರಿತಂತೆ ಆಘಾತ ವ್ಯಕ್ತಪಡಿಸಿರುವ ಸಿಎಂ ಬಿರೇನ್ ಸಿಂಗ್, ಭೂ ಕುಸಿತ ಪರಿಸ್ಥಿತಿ ಕುರಿತು ತುರ್ತು ಸಭೆಯನ್ನು ಕರೆಯಲಾಗಿದೆ. ಸ್ಥಳಕ್ಕೆ ವೈದ್ಯಕೀಯ ನೆರವನ್ನು ನೀಡಲಾಗಿದೆ ಎಂದು ಟ್ವೀಟ್​ ಮಾಡಿದ್ದಾರೆ.


    ಈ ಮಧ್ಯೆ ಘಟನೆ ಕುರಿತು ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಮಣಿಪುರದ ತುಪುಲ್ ರೈಲು ನಿಲ್ದಾಣದ ಬಳಿ ಭೂಕುಸಿತದ ಹಿನ್ನೆಲೆಯಲ್ಲಿ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಎನ್‌ಡಿಆರ್‌ಎಫ್ ತಂಡ ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಇನ್ನೂ 2 ತಂಡಗಳು ತುಪುಲ್‌ಗೆ ಕಳುಹಿಸಲಾಗಿದೆ ಎಂದು ಟ್ವೀಟ್​ ಮಾಡಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts