ಚರಂಡಿ ಕಾಮಗಾರಿ ಅಪೂರ್ಣ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

<<ಮಳೆಗಾಲ ಎದುರಿಸಲು ಇನ್ನೂ ಸಿದ್ಧವಾಗದ ಮನಪಾ * ಕಳೆದ ಬಾರಿಯಂತೆ ಪ್ರವಾಹ ಸೃಷ್ಟಿಯಾದೀತು ಎಂದು ಸಾರ್ವಜನಿಕರ ಎಚ್ಚರಿಕೆ>>

ಭರತ್‌ರಾಜ್ ಸೊರಕೆ ಮಂಗಳೂರು
ವಾಡಿಕೆಯಂತೆ ಮಳೆಯಾಗುವುದಕ್ಕೆ ಇನ್ನಿರುವುದು 15 ದಿನ. ಆದರೆ ನಗರದಲ್ಲಿ ಕೈಗೊಂಡ ಚರಂಡಿ ಕೆಲಸಗಳು ಅಪೂರ್ಣ. ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಎದುರಿಸಲು ಇನ್ನೂ ಪೂರ್ಣ ಪ್ರಮಾಣದಲ್ಲಿ ಸಜ್ಜಾಗಿಲ್ಲ.
ನಗರದ ಪ್ರಮುಖ ಪ್ರದೇಶಗಳಲ್ಲಿ ಚರಂಡಿ ಕಾಮಗಾರಿ, ರಸ್ತೆ ರಿಪೇರಿ, ಒಳಚರಂಡಿ ಕಾಮಗಾರಿಗಳು ಅರೆಬರೆಯಾಗಿ ಸಾಗಿದೆ. ಏಕಾಏಕಿ ಮಳೆಯಾದರೆ ರಸ್ತೆಯೇ ಚರಂಡಿಯಾಗುವ ಸಾಧ್ಯತೆ ಇದೆ. ನಿಧಾನಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗಳಿಂದ ಕಳೆದ ಬಾರಿಯಂತೆ ಪ್ರವಾಹ ಸೃಷ್ಟಿಯಾದೀತು ಎನ್ನುವುದು ಸಾರ್ವಜನಿಕರ ದೂರು.
ಕರಂಗಲ್ಪಾಡಿ, ಜೈಲ್‌ರೋಡ್, ಕಪುಚಿನ್ ಚರ್ಚ್ ಎದುರು ಕಳೆದ ಮೂರು ತಿಂಗಳಿನಿಂದ ಕಾಮಗಾರಿ ಸ್ಥಗಿತಕೊಂಡಿದೆ. ಹಿಂದೆ ಚುನಾವಣೆ, ಅನುದಾನದ ಕೊರತೆ ಹೇಳಿ ಕಾಮಗಾರಿ ಸ್ಥಗಿತಗೊಂಡಿತ್ತು. ಈ ಸಮಸ್ಯೆಗಳೆಲ್ಲ ಕಳೆದು ತಿಂಗಳಾದರೂ ಕಾಮಗಾರಿ ವೇಗ ಪಡೆದಿಲ್ಲ. ಒಂದಿಬ್ಬರು ಕೆಲಸಗಾರರು ಮಾತ್ರ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಮಳೆ ನೀರು ಹರಿಯಲು ಚರಂಡಿ ಇಲ್ಲದ ಪರಿಣಾಮ ಪ್ರತಿ ವರ್ಷ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿತ್ತು. ಈಗ ಚರಂಡಿ ನಿರ್ಮಾಣವಾದರೂ ಅರೆಬರೆಯಾಗಿ ಪ್ರಯೋಜನವಿಲ್ಲ.
ಬಂಟ್ಸ್‌ಹಾಸ್ಟೆಲ್‌ನಿಂದ ಜ್ಯೋತಿ ಸರ್ಕಲ್‌ಗೆ ಹೋಗುವ ಎಡಬದಿ ಚರಂಡಿ ಮಾಡಲು ತೆಗೆದ ಬೃಹತ್ ಹೊಂಡಗಳು ಹಾಗೇ ಇದೆ. ರಾತ್ರಿ ವೇಳೆ ವಾಹನಗಳು ಸೈಡ್ ಕೊಡುವಾಗ ಗುಂಡಿಗೆ ಬಿದ್ದರೂ ಆಶ್ಚರ್ಯವಿಲ್ಲ. ಮಳೆಗಾಲದಲ್ಲಿ ನೀರು ನಿಂತರೆ ತೊಂದರೆ ಜಾಸ್ತಿ.
ಉರ್ವಸ್ಟೋರ್‌ನಿಂದ ಪಿವಿಎಸ್ ವೃತ್ತದವರೆಗಿನ ರಸ್ತೆ ವಿಸ್ತರಣೆ, ಕಾಂಕ್ರೀಟ್ ಕಾಮಗಾರಿ ಮುಗಿದು ಹಲವು ವರ್ಷಗಳಾಗಿದ್ದರೂ ಫುಟ್‌ಪಾತ್, ಚರಂಡಿ ಕಾಮಗಾರಿಗಳು ಆಗಿಲ್ಲ. ಕೆಲ ತಿಂಗಳ ಹಿಂದೆ ತುರ್ತಾಗಿ ಆರಂಭಿಸಿದ್ದರೂ ವೇಗ ಪಡೆದಿಲ್ಲ. ಲಾಲ್‌ಭಾಗ್‌ನ ಕೆಲವು ಕಡೆ ಇದ್ದ ಹಳೇ ಚರಂಡಿ ತೆರವು ಮಾಡಿ ಹೊಸ ಕಾಮಗಾರಿ ಆರಂಭಿಸಿದ್ದರು. ಆದರೆ ಇದು ಕುಂಟುತ್ತಾ ಸಾಗಿದೆ.
ಮಂಗಳೂರಿನ ಸಿಟಿ ಆಸ್ಪತ್ರೆ ಮುಂಭಾಗದಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಮಳೆ ಬಂದರೆ ತೊಂದರೆಯಾದೀತು. ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆ ಮುಂಭಾಗದಲ್ಲಿರುವ ರಿಕ್ಷಾ ಪಾರ್ಕ್ ಸಮೀಪ ಬೃಹತ್ ಹೊಂಡ ತೆಗೆದು ಅದನ್ನು ಮುಚ್ಚದೆ ಕೆಲವು ತಿಂಗಳಿನಿಂದ ಹಾಗೆಯೇ ಬಿಡಲಾಗಿದೆ. ಬಿಜೈ ಭಾಗದಲ್ಲಿ ಎರಡೂ ಬದಿ ಕೆಲಸ ನಡೆಯುತ್ತಿದ್ದು ರಸ್ತೆ ಮೇಲೆ ಮಣ್ಣಿದೆ.
ಕುದ್ರೋಳಿ ಭಾಗದಿಂದ ಮುಲ್ಲಕಾಡುವಿನ ತ್ಯಾಜ್ಯನೀರು ಸಂಸ್ಕರಣ ಘಟಕಕ್ಕೆ ಹೊಸದಾಗಿ ಪೈಪ್‌ಲೈನ್ ಹಾಕುವ ಕಾಮಗಾರಿ ಸದ್ಯ ಉರ್ವ ಸರ್ಕಲ್‌ನಿಂದ ಅಶೋಕ್‌ನಗರ ಭಾಗದಲ್ಲಿ ಪಾಲಿಕೆಯಿಂದ ನಡೆಯುತ್ತಿದೆ. ರಸ್ತೆ ಅಗೆದಲ್ಲಿ ಇನ್ನೂ ಕಾಂಕ್ರೀಟ್ ಹಾಕಿಲ್ಲ. ಇಲ್ಲಿ ಕೆಲಸ ಪೂರ್ಣಗೊಳ್ಳಲು ತಿಂಗಳು ಬೇಕು.

ಮಳೆ ಬಂದರೆ ಪಂಪ್‌ವೆಲ್ ಕೆಸರು:  ಪಂಪ್‌ವೆಲ್ ಪ್ಲೈಓವರ್ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ಲೋಡುಗಟ್ಟಲೆ ಮಣ್ಣಿನ ರಾಶಿ ರಸ್ತೆಯಲ್ಲಿ ಬಾಕಿ ಇದೆ. ಇಲ್ಲಿ ರಾಜಕಾಲುವೆಯಲ್ಲಿಯೂ ಕೆಲಸ ನಡೆಯುತ್ತಿದೆ. ಫ್ಲೈಓವರ್‌ನ ಅಡಿ ರಸ್ತೆ ಮಟ್ಟಕ್ಕಿಂತ ಕೆಳಗಿದೆ. ಹೀಗಾಗಿ ಈ ವರ್ಷ ಮಳೆಗಾಲದಲ್ಲಿ ಫ್ಲೈಓವರ್‌ನಡಿ ಸಂಚಾರ ಅಸಾಧ್ಯ ಎನ್ನುವುದು ಜನರ ಮಾತು. ಈ ಪ್ರದೇಶದಲ್ಲಿ ಮಳೆಗೆ ಸಂಚಾರ ದಟ್ಟನೆ ಹೆಚ್ಚುವ ಸಾಧ್ಯತೆ ಇದೆ.

ನೀರು ಹೋಗಲು ಜಾಗವಿಲ್ಲ:  ರಸ್ತೆ ನೀರು ಚರಂಡಿಗೆ ಸೇರಬೇಕಾದರೆ ಕಾಮಗಾರಿ ಸಂದರ್ಭದಲ್ಲೇ ಜಾಗ ಮಾಡಿಕೊಡಬೇಕು. ಆದರೆ ಕರಂಗಲ್ಪಾಡಿಯಲ್ಲಿ ನಡೆಯುತ್ತಿರುವ ಕಾಮಗಾರಿಯಲ್ಲಿ ಚರಂಡಿಗೆ ನೀರು ಸೇರಲು ಜಾಗವೇ ಇಲ್ಲ. ಮಳೆ ನೀರು ರಸ್ತೆಯಲ್ಲೇ ಹರಿಯಬೇಕು. ಹಲವೆಡೆ ಫುಟ್‌ಪಾತ್‌ಗೆ ಕಬ್ಬಿಣದ ಹಲಗೆ ಅಳವಡಿಸಲು ಬಾಕಿ ಇದೆ.

ಕೆಲಸವಾಗದಿದ್ದರೆ ಮಾಹಿತಿ ನೀಡಿ:  ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಜಕಾಲುವೆ ಅಥವಾ ಚರಂಡಿಗಳ ಹೂಳೆತ್ತುವ ಕಾರ್ಯ ಸರಿಯಾಗಿ ಆಗದೇ ಇದ್ದಲ್ಲಿ ಫೋಟೋ, ವಿಳಾಸದೊಂದಿಗೆ ಮಾಹಿತಿ ನೀಡುವಂತೆ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. 7338198477 ಸಂಖ್ಯೆಗೆ ಸಾರ್ವಜನಿಕರು ಮಾಹಿತಿ ನೀಡಬಹುದು. ಕಳೆದ ಮಳೆಗಾಲದಲ್ಲಿ ಉಂಟಾದ ಕೃತಕ ನೆರೆ ಈ ಬಾರಿ ಪುನರಾವರ್ತನೆ ಆಗದಂತೆ ನೋಡಿಕೊಳ್ಳೋಣ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಮಳೆಗಾಲದಲ್ಲಿ ಪ್ರವಾಹ ಬಂದು ಸಾರ್ವಜನಿಕರಿಗೆ ತೊಂದರೆಯಾದರೆ ಪಾಲಿಕೆ ಅಧಿಕಾರಿಗಳೇ ನೇರ ಹೊಣೆ. ಕಾಮಗಾರಿ ಕುಂಟುತ್ತಾ ಸಾಗಿದೆ. ತಕ್ಷಣವೇ ಅಧಿಕಾರಿಗಳು ಪರಿಶೀಲಿಸಿ ಕ್ರಮಕೈಗೊಳ್ಳಬೇಕು.
ವೇದವ್ಯಾಸ ಕಾಮತ್ ಶಾಸಕರು

ರಾಜಕಾಲುವೆ ಹೂಳು ತೆಗೆಯುವ ಕೆಲಸ, ಚರಂಡಿ ಕಾಮಗಾರಿ ನಡೆಯುತ್ತಿದೆ. ಅರ್ಧದಲ್ಲಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಮುಗಿಸುವಂತೆ ಇಂಜಿನಿಯರ್‌ಗಳಿಗೆ, ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
ಬಿ.ಎಚ್.ನಾರಾಯಣಪ್ಪ, ಮನಪಾ ಆಯುಕ್ತರು 

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....