More

    ಲೈಂಗಿಕ ದೌರ್ಜನ್ಯ; ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳಿಂದ ಪ್ರತಿಭಟನೆ

    ಚೆನೈ: ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಖಾಲೇಜು ಆಡಳಿತ ಮಂಡಳಿ ವಿರುದ್ದ ಪ್ರತಿಭಟನೆ ನಡೆಸಿರುವ ಘಟನೆ ಚೆನೈನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕಲಾಕ್ಷೇತ್ರದಲ್ಲಿ ನಡೆದಿದೆ.

    ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನಲೆ ಸಹಾಯಕ ಪ್ರಾಧ್ಯಪಕ ಹರಿಪದ್ಮನ್​, ಸಂಜಿತ್​ ಲಾಲ್​​, ಸಾಯಿ ಕೃಷ್ಣನ್​​, ಶ್ರೀನಾಥ್ ವಿರುದ್ಧ ಪೊಲೀಸರು​​ ದುರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 90ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಮಿಳುನಾಡು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

    ಕಾಲೇಜಿನಲ್ಲಿ ಹಲವು ವರ್ಷಗಳಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ನಿಂದನೆ, ತಾರತಮ್ಯ ಮಾಡಿದ್ದಾರೆ. ಕಾಲೇಜು ಆಡಳಿತ ಮಂಡಳಿಗೆ ಹಲವು ಭಾರಿ ದೂರು ನೀಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್​ ಹಾಗೂ ಕೇಂದ್ರ ಸಚಿವ ಕಿಶನ್​ ರೆಡ್ಡಿಗೆ ಪತ್ರ ಬರೆದಿರುವುದಾಗಿ ವಿದ್ಯಾರ್ಥಿನಿಯರು ತಿಳಿಸಿದ್ದಾರೆ.

    ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ; ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

    ವಿದ್ಯಾರ್ಥಿನಿಯರ ಮನವಿಗೆ ಸ್ಪಂದಿಸಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್​ ಸೂಕ್ತ ತನಿಖೆಗೆ ಆದೇಶಿಸಿದ್ದಾರೆ ಮತ್ತು ತಪ್ಪಿತಸ್ಥರು ಕಂಡು ಬಂದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ಧಾರೆ ಎಂದು ವರದಿಯಾಗಿದೆ.

    ತಮಿಳುಣಾಡು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಎ.ಆರ್​.ಕುಮಾರಿ ಪ್ರತಿಕ್ರಿಯಿಸಿ ಕಲಾಕ್ಷೇತ್ರ ಕಾಲೇಜು ಕ್ಯಾಂಪಸ್​ನಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು 90ದೂರುಗಳನ್ನು ಸ್ವೀಕರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಳಾಗುವುದು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts