ಹಣದ ವಿಚಾರಕ್ಕೆ ಸೆಕ್ಸ್​​ ವರ್ಕರ್​ನನ್ನು ಬರ್ಬರವಾಗಿ ಕೊಂದ ಗ್ರಾಹಕ; ಆತ ಸಿಕ್ಕಿಬಿದ್ದಿದ್ದೆ ರೋಚಕ

Chennai Murder

ಚೆನ್ನೈ: ಸೆಪ್ಟೆಂಬರ್​ 18ರಂದು ಚೆನ್ನೈನ ತತೊರೈಪಾಕ್ಕಂ ಬಳಿ ಸೂಟ್​ಕೇಸ್​ನಲ್ಲಿ ಪತ್ತೆಯಾಗಿದ್ದ ಮಹಿಳೆಯ ತುಂಡರಿಸಿದ ಶವಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ವೇಳೆ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.

ಸೆಪ್ಟೆಂಬರ್​ 18ರಂದು ಚೆನ್ನೈನ ಕುಮಾರನ್ ಕುಡಿಲ್ ನಿವಾಸಿಯೊಬ್ಬರು ಮುಂಜಾನೆ 5.30ರ ಸುಮಾರಿಗೆ ತೊರೈಪಾಕ್ಕಂ ಪ್ರದೇಶದಲ್ಲಿ ಬಿದ್ದಿರುವ ಸೂಟ್‌ಕೇಸ್ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಸೂಟ್​ಕೇಸ್​ನಲ್ಲಿದ್ದ ಮೃತದೇಹದ ಭಾಗಗಳನ್ನು ಹೊರತೆಗೆದು ಅದನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದು, ಬಂಧಿತನನ್ನು ಮಣಿಕಂದನ್‍ (22) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯನ್ನು ಮನಾಲಿ ಮೂಲದ ದೀಪಾ (32) ಎಂದು ಗುರುತಿಸಲಾಗಿದ್ದು, ಈಕೆ ಸೆಕ್ಸ್​ ವರ್ಕರ್​ ಆಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್​ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: VIDEO| ಅವನನ್ನು ನೋಡಿ ಚೆಂಡೆಸಿ ನಂಗ್ಯಾಕೆ…ಪಂತ್​ರನ್ನು ಸುಖಾಸುಮ್ಮನೆ ಕೆಣಕಿದ ಬಾಂಗ್ಲಾ ಆಟಗಾರ

ಘಟನೆ ಕುರಿತು ಮಾಹಿತಿ ನೀಡಿರುವ ಹಿರಿಯ ಅಧಿಕಾರಿಯೊಬ್ಬರು, ಮೃತ ಮಹಿಳೆ ಚೆನ್ನೈನ ಮಾಧವರಂ ಬಳಿಯ ಪೊನ್ನಿಯಮ್ಮನ್ ಮೇಡು ನಿವಾಸಿಯಾಗಿದ್ದು, ಆಕೆ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಬ್ರೋಕರ್​ ಒಬ್ಬರ ಮೂಲಕ ದೀಪಾ ತೊರೈಪಾಕ್ಕಂಗೆ ತೆರಳಿದ್ದರು. ಸಹೋದರಿ ಮನೆಗೆ ಬಾರದೇ ಇದ್ದುದರಿಂದ ಗಾಬರಿಗೊಂಡ ಸಹೋದರ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದರು. ಮೊಬೈಲ್ ಅಪ್ಲಿಕೇಶನ್ ಬಳಸಿ ನಗರದ ತೊರೈಪಕ್ಕಂನಲ್ಲಿ ಸಹೋದರಿಯ ಫೋನ್​ ಲೊಕೇಷನ್​ ಟ್ರೇಸ್​ ಆಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹ ತನ್ನ ಸಹೋದರಿಯದ್ದೆ ಎಂದು ಸಹೋದರ ಖಚಿತಪಡಿಸಿದ್ದಾನೆ.

ಬ್ರೋಕರ್​ ಒಬ್ಬರ ಮೂಲಕ ಆರೋಪಿ ಮಣಿಕಂದನ್​ ಮಹಿಳೆಯನ್ನು ತನ್ನ ಮೆನೆಗೆ ಕರೆಸಿಕೊಂಡಿದ್ದ. ಬಳಿಕ ಹಣಕಾಸು ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದ್ದು, ಆರೋಪಿ ಆಕೆಯನ್ನು ಕೊಲೆ ಮಾಡಿ ದೇಹವನ್ನು ಕತ್ತರಿಸಿ ಸೂಟ್​ಕೇಸ್​ನಲ್ಲಿ ತುಂಬಿ ತೊರೈಪಕ್ಕಂನ ರಸ್ತೆ ಬದಿ ಎಸೆದು ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಅಧಿಕಾರಿಗಳು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ.

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…