ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ: ರಾಷ್ಟ್ರೀಯ ಮಹಿಳಾ ಆಯೋಗ

Prajwal Revanna
Published on

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಭಾರೀ ಗದ್ದಲವನ್ನು ಉಂಟು ಮಾಡಿರುವ ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿರುವ ಎಸ್​ಐಟಿ ಮಹತ್ವದ ದಾಖಲೆಗಳನ್ನು ಕಲೆಹಾಕಿ ವಿಚಾರಣೆ ನಡೆಸುತ್ತಿದೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಪ್ರತಿಕ್ರಿಯಿಸಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್​ ನೀಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರಕಟಣೆ ಹೊರಡಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ (NCW) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಒಂದನ್ನು ಬಹಿರಂಗಪಡಿಸಿದೆ.

ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ರೀತಿ ಪ್ರಜ್ವಲ್​ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ 700 ಮಹಿಳೆಯರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಯಾವುದೇ ದೂರು ನೀಡಿಲ್ಲ. ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಕಟಿಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದೆ.

ಪ್ರಜ್ವಲ್​ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿದ್ದಾರೆ. ಸಿವಿಲ್ ಡ್ರೆಸ್‍ನಲ್ಲಿ ಬಂದಿದ್ದ ಮೂವರು ಬೆದರಿಕೆ ಹಾಕಿದ್ದಾರೆ. ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ಕೊಡುವಂತೆ ಒತ್ತಡ ಹೇರಿದ್ದಾರೆ. ಬೇರೆ, ಬೇರೆ ಫೋನ್ ನಂಬರ್​​​ಗಳಿಂದ ನಿರಂತರ ಕರೆ ಮಾಡಲಾಗಿದೆ. ಅಲ್ಲದೇ ದೂರವಾಣಿ ಮೂಲಕವು ಸಹ ಒತ್ತಡ ಹಾಕಲಾಗಿದೆ ಎಂದು ಸಂತ್ರಸ್ತೆ ದೂರಿರುವುದಾಗಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net