ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

New Project
Published on

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಆರೋಪಿ ಶಿರ್ಲಾಲು ಗ್ರಾಮದ ಸನತ್(28) ಎಂಬಾತನ ಮೇಲೆ ವೇಣೂರು ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಸನತ್ ಬಾಲಕಿಯ ತಂದೆಯ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಬಾಲಕಿ ಜತೆ ಸಲುಗೆಯಿಂದ ಇದ್ದ ಎನ್ನಲಾಗಿದೆ. 2024 ಮೇ 22ರಂದು ಬಾಲಕಿಯ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಬಂದು ರಾತ್ರಿ ಉಳಿದುಕೊಂಡಿದ್ದನು. ರಾತ್ರಿ ಬಾಲಕಿ ಮಲಗಿದ ಕೋಣೆಗೆ ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಂತರವೂ ಆಗಾಗ ರಾತ್ರಿ ಬಂದು ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಇದೀಗ ಆರೋಪಿ ಸನತ್ ವಿರುದ್ಧ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net