More

    ಚಾಕಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್

    ಶಿವಮೊಗ್ಗ: ಚಾಕಲೇಟ್ ಕೊಡುವುದಾಗಿ ಮನೆಗೆ ಕರೆದೊಯ್ದು ಆರು ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ (ತ್ವರಿತ ವಿಶೇಷ ನ್ಯಾಯಾಲಯ)-2 (ಪೋಕ್ಸೊ)ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದ್ದಾರೆ.

    ಭದ್ರಾವತಿ ತಾಲೂಕಿನ ಲಿಂಗರಾಜ್ ಅಲಿಯಾಸ್ ನವೀನ್ (18) ಶಿಕ್ಷೆಗೆ ಒಳಗಾದವ. ಈತ 2019ರ ಫೆ.10ರಂದು ಮನೆ ಮುಂದೆ ಆಟವಾಡುತ್ತಿದ್ದ ಅಪ್ರಾಪ್ತೆಗೆ ಚಾಕಲೇಟ್ ಕೊಡುತ್ತೇನೆಂದು ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ಭದ್ರಾವತಿ ಗ್ರಾಮಾಂತರ ಸಿಪಿಐ ಯೋಗೇಶ್ ಪ್ರಕರಣದ ತನಿಖೆ ನಡೆಸಿ ಲಿಂಗರಾಜನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

    ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಜೆ.ಎಸ್.ಮೋಹನ್ ಅವರು ಗುರುವಾರ ಲಿಂಗರಾಜ್ ಮೇಲಿನ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರಗೃಹ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

    ಡೇಟಿಂಗ್ ಆ್ಯಪ್ ಬೆಡಗಿಗಾಗಿ ಕೋಟಿ ಕೊಟ್ಟು ಕೈ ಸುಟ್ಟುಕೊಂಡ ಬ್ಯಾಂಕ್ ಮ್ಯಾನೇಜರ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts