More

    ಲೈಂಗಿಕ ದೌರ್ಜನ್ಯ ಆರೋಪ; ಪ್ರಜ್ವಲ್ ವಾಪಸ್ ಕರೆಸಿಕೊಳ್ಳಲು ಕ್ರಮ

    ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಇದರ ಜತೆಗೆ ಈಗ ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧವೂ ದೂರು ದಾಖಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ, ಯಾರೆ ಇದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

    ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೂರುದಾರರು ಯಾರ ಹೆಸರು ಉಲ್ಲೇಖಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತರಿಗೆ ಭಯ ಹುಟ್ಟಿಸಿದರೇ ಅವರಿಗೆ ನಾವು ಭದ್ರತೆ ನೀಡುತ್ತೇವೆ ಎಂದರು.

    ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿದ್ದೇವೆ. ಎಸ್‌ಐಟಿ ಅಧಿಕಾರಿಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳು ಪೆನ್‌ಡ್ರೈವ್, ಸಾಕ್ಷಿ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ವಿದೇಶದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ. ಎಸ್‌ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಲ್ಲ ವೀಡಿಯೊಗಳನ್ನು ಎ್ಎಸ್‌ಎಲ್ಗೆ ಕಳುಹಿಸುತ್ತೇವೆ ಎಂದು ಡಾ.ಜಿ.ಪರಮೇಶ್ವರ ಹೇಳಿದರು.

    ತ್ವರಿತಗತಿಯಲ್ಲಿ ತನಿಖೆಗೆ ಸೂಚನೆ

    ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
    ಎಸ್‌ಐಟಿ ತಂಡವು ಮುಕ್ತವಾಗಿ ಕೆಲಸ ಮಾಡಲಿದೆ. ಪ್ರಕರಣದ ವರದಿ ಸಲ್ಲಿಸಲು ಯಾವುದೇ ರೀತಿಯ ಸಮಯ ನಿಗದಿಪಡಿಸಿಲ್ಲ. ತನಿಖೆ ವಿಳಂಬವಾಗಬಾರದು ಎಂಬ ದೃಷ್ಟಿಯಿಂದ ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಮೌಖಿಕವಾಗಿ ತಿಳಿಸಲಾಗಿದೆ. ವರದಿಯನ್ನು ನಾಳೆಯೇ ಕೊಡಿ, ನಾಡಿದ್ದು ಕೊಡಿ ಎಂದು ದಿನ ನಿಗದಿಪಡಿಸಿಲ್ಲ. ಸಂತ್ರಸ್ತರಿಗೆ ಜೀವ ಭಯವಿದ್ದರೆ ಪೊಲೀಸ್ ಭದ್ರತೆ ನೀಡಲಾಗುವುದು ಎಂದು ಡಾ.ಪರಮೇಶ್ವರ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts