More

    ಲೈಂಗಿಕ ದೌರ್ಜನ್ಯ, ಯುವಕನಿಗೆ ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ

    ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸೊ)ರ ನ್ಯಾಯಾಧೀಶರು ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 30 ಸಾವಿರ ರೂ. ದಂಡ ವಿಧಿಸಿದ್ದಾರೆ.
    ಸಾಗರ ತಾಲೂಕಿನ ವಿನೋದ್ (19) ಶಿಕ್ಷೆಗೆ ಒಳಗಾದವ. ಈತ ಕಳೆದ ಏ.28ರಂದು ಮನೆಗೆ ನಡೆದುಕೊಂಡು ಹೋಗುತ್ತಿದ್ದ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಜೋಗ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಯಾಗಿದ್ದ ಜೋಗ ಠಾಣೆ ಪಿಎಸ್‌ಐ ನಿರ್ಮಲಾ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
    ಶುಕ್ರವಾರ ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಲತಾ ಅವರು ವಿನೋದ್ ಮೇಲಿನ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿಯಾಗಿ 10 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts