ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

rape
Published on

ಮುಂಡಗೋಡ: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಅಪ್ರಾಪ್ತೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಮಾರ್ಗ ಮಧ್ಯೆ ಹೆರಿಗೆಯಾದ ಘಟನೆ ಸೋಮವಾರ ನಡೆದಿದೆ.

ಪಾಲಕರೊಂದಿಗೆ ಕೂಲಿ ಕೆಲಸಕ್ಕೆ ಕುಂದಾಪುರಕ್ಕೆ 15 ವರ್ಷದ ಬಾಲಕಿ ಹೋಗಿದ್ದಳು. ಮಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಪರಿಣಾಮ ಕುಂದಾಪುರದಲ್ಲಿ ಅಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಗರ್ಭವತಿ ಆಗಿರುವ ವಿಷಯ ತಿಳಿದು ಬಂದಿದೆ. ಬಾಲಕಿಯನ್ನು ಮುಂಡಗೋಡ ತಾಲೂಕು ಅಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಹುಬ್ಬಳ್ಳಿಗೆ ಕರೆದುಕೊಂಡು ಹೋಗುತ್ತಿರುವಾಗ ತಡಸ ಸನಿಹ ಹೆರಿಗೆಯಾಗಿದೆ. ಮಗು ಮೃತಪಟ್ಟಿದ್ದು, ಬಾಲಕಿಯನ್ನು ಮರಳಿ ತಾಲೂಕು ಅಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಹೆಸರನ್ನು ಬಾಲಕಿ ಹೇಳುತ್ತಿಲ್ಲ ಎನ್ನಲಾಗಿದೆ. ಈ ಕುರಿತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net