More

    ಲೈಂಗಿಕ ಕಿರುಕುಳ ಪ್ರಕರಣ; ತಮ್ಮ ವಿರುದ್ಧ ಮಾಡಿರುವ ಆರೋಪ ಸುಳ್ಳು, ಪ್ರೇರಿತ ಎಂದ WFI ಮಾಜಿ ಅಧ್ಯಕ್ಷ

    ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ವಿರುದ್ಧ ಮಾಡಲಾಗಿರುವ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಹಾಗೂ ಪ್ರಚೋದಿತ ಎಂದಿದ್ದಾರೆ.

    ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ಹರ್ಜೀತ್ ಸಿಂಗ್ ಜಸ್ಪಾಲ್ ಅವರಿದ್ದ ಏಕಸದಸ್ಯ ಪೀಠದ ಮುಂಭಾಗ ಬ್ರಿಜ್​ ಭೂಷಣ್​ ಶರಣ್​ ಸಿಂಗ್ ಪರ ವಕೀಲರು ವಾದ ಮಂಡಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರ ಪೈಕಿ ಓರ್ವರು ಲೈಂಗಿಕ ಕಿರುಕುಳ ಸಮಿತಿಯ ಸದಸ್ಯರಾಗಿದ್ದಾರೆ. ಅವರು 2012ರಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿತ್ತು ಎಂದು ಆರೋಪಿಸಿದ್ದಾರೆ. ಆದರೆ, 2023ರ ಏಪ್ರಿಲ್​ವರೆಗೂ ಈ ವಿಚಾರವನ್ನು ಯಾಕೆ ಬಹಿರಂಗಪಡಿಸಿಲ್ಲ. ಆರೋಪ ಮಾಡಿರುವ ವ್ಯಕ್ತಿಯೂ 2015ರಲ್ಲಿ ಒಲಿಂಪಿಕ್ಸ್​ಗೆ ಅರ್ಹತೆ ಪಡೆಯಲು ವಿಫಲರಾದ ಕಾರಣ ಅವರು ಈ ರೀತಿಯ ಆರೋಪಗಳನ್ನು ಮಾಡಿದ್ದಾರೆ.

    ಇದನ್ನೂ ಓದಿ: ಹಮಾಸ್ ಉಗ್ರರ ದಾಳಿ; ಕಷ್ಟದ ಸಮಯದಲ್ಲಿ ಇಸ್ರೇಲ್ ಪರ ನಿಲ್ಲುತ್ತೇವೆ ಎಂದ ಪ್ರಧಾನಿ ಮೋದಿ

    ತಮ್ಮ ಕಕ್ಷಿದಾರರ ವಿರುದ್ಧ ದೂರುದಾರರು ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳಾಗಿದ್ದು, ದೂರುದಾರರು ನಿರಂತರವಾಗಿ ತಮ್ಮ ಹೇಳಿಕೆಗಳನ್ನು ಬದಲಾಯಿಸುತ್ತ ಬಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸಿಲುಕಿಸಲು ಸುಳ್ಳು ಹಾಗೂ ಪ್ರಚೋದಿತ ಹೇಳಿಕೆಗಳನ್ನು ನೀಡಲಾಗಿದೆ. ಪ್ರತಿಯೊಂದು ದೂರಿಗೂ ಒಂದೊಂದು ಕಾರಣಗಳಿರುತ್ತವೆ ಎಂದು ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್ ಪರ ವಕೀಲರು ವಾದ ಮಂಡಿಸಿದ್ದಾರೆ.

    ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 16ಕ್ಕೆ ನಡೆಸುವುದಾಗಿ ಮುಂದೂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts