

ವಿಜಯವಾಣಿ ಸುದ್ದಿಜಾಲ ಉಡುಪಿ
ಐದು ವರ್ಷದ ಬಾಲಕಿಗೆ ಅಪರಿಚಿತ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿದ ಹೀನ ಕೃತ್ಯ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಈ ಕುರಿತು ಬಾಲಕಿಯ ಪೋಷಕರು ದೂರು ನೀಡಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಂದಾಜು 30 ವರ್ಷದ ಶಂಕಿತ ಆರೋಪಿಯ ಫೋಟೋ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಪೊಲೀಸರು ಶಂಕಿತನ ಫೋಟೋ ಬಿಡುಗಡೆ ಮಾಡಿದ್ದಾರೆ. ಆತನ ಬಗ್ಗೆ ಮಾಹಿತಿಯಿದ್ದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ತಿಳಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
ಕಂಟ್ರೋಲ್ ರೂಮ್- 9480805400. ಮಹಿಳಾ ಠಾಣೆ ಪೊಲೀಸ್ ನಿರೀಕ್ಷಕರು- 9480805430. ಮಹಿಳಾ ಠಾಣೆ ಪೊಲೀಸ್ ಉಪನಿರೀಕ್ಷಕರು- 8277988949. ಮಹಿಳಾ ಠಾಣೆ ದೂ.ಸಂ.- 0820-2525599 ಈ ನಂಬರ್ಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.