

ಕಾಸರಗೋಡು: ಹದಿನೈದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಉದಿನೂರು ಮಣಿಯೋಡಿ ನಿವಾಸಿ, ಬಸ್ ಚಾಲಕ ಶಬೀರ್(35)ಎಂಬಾತನನ್ನು ಚಂದೇರ ಠಾಣೆ ಪೊಲೀಸರು ಬಂಧಿಸಿದ್ದು, ಈತನ ವಿರುದ್ಧ ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ. ಜುಲೈ ತಿಂಗಳಿಂದ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕಿ ಕೌನ್ಸೆಲಿಂಗ್ ಸಂದರ್ಭ ತಿಳಿಸಿದ್ದು, ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.