More

    ಹಾಸ್ಟೆಲ್ ಎದುರು ಎಸ್​ಎಫ್​ಐ ಪ್ರತಿಭಟನೆ

    ರಾಣೆಬೆನ್ನೂರ: ಇಲ್ಲಿಯ ಕಮಲಾ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಸೂಕ್ತ ರೀತಿಯಲ್ಲಿ ಊಟ ನೀಡುತ್ತಿಲ್ಲ. ಸರ್ಕಾರದ ಸೌಲಭ್ಯಗಳನ್ನು ವಿದ್ಯಾರ್ಥಿನಿಯರಿಗೆ ನೀಡುತ್ತಿಲ್ಲ ಎಂದು ಆರೋಪಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್ (ಎಸ್​ಎಫ್​ಐ) ವತಿಯಿಂದ ಭಾನುವಾರ ಹಾಸ್ಟೆಲ್ ಎದುರು ಪ್ರತಿಭಟನೆ ನಡೆಸಲಾಯಿತು.

    ಸಂಘಟನೆ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಸರಿಯಾದ ಸಮಯಕ್ಕೆ ಊಟದ ವ್ಯವಸ್ಥೆ ಮಾಡುತ್ತಿಲ್ಲ. ಗುಣಮಟ್ಟದ ಆಹಾರ ನೀಡುವಂತೆ ಅನೇಕ ಬಾರಿ ಹೇಳಿದ್ದರೂ ಸ್ಪಂದಿಸುತ್ತಿಲ್ಲ. ಕೆಲ ತಿಂಗಳಿನಿಂದ ವಿದ್ಯಾರ್ಥಿಗಳಿಗೆ ಊಟದ ಸಮಸ್ಯೆ ಎದುರಾಗಿದೆ.

    ಈ ಬಗ್ಗೆ ವಾರ್ಡನ್ ಗಮನಕ್ಕೆ ತರಲು ಯತ್ನಿಸಿದರೆ ವಾರ್ಡನ್ ವಿದ್ಯಾರ್ಥಿನಿಯರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಸರ್ಕಾರದಿಂದ ನೀಡುವ ಪ್ಯಾಡ್ ಸೇರಿ ಇತರ ವಸ್ತುಗಳನ್ನು ನೀಡುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

    ವಿದ್ಯಾರ್ಥಿನಿ ಸಾಧನಾ ಹೆಳವರ ಮಾತನಾಡಿ, ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಗ್ರಂಥಾಲಯದಲ್ಲಿ ಪುಸ್ತಕ ನೀಡುತ್ತಿಲ್ಲ. ಊಟದ ವ್ಯವಸ್ಥೆಯಲ್ಲಿ ತಾರತಮ್ಯ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯರೊಂದಿಗೆ ಅಡುಗೆ ಸಿಬ್ಬಂದಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

    ಸ್ಥಳಕ್ಕೆ ಬಂದ ಗ್ರೇಡ್-2 ವಿಸ್ತರಣಾಧಿಕಾರಿ ಪ್ರಸಾದ ಆಲದಕಟ್ಟಿ ಅವರಿಗೆ ಮನವಿ ಸಲ್ಲಿಸಿದರು. ಸಂಘಟನೆಯ ಪ್ರಮುಖರಾದ ಮಹೇಶ ನರೇಗಲ್ಲ, ಶ್ರೀಧರ ಛಲವಾದಿ, ಲಕ್ಷ್ಮಣ ಕೆಂಗಪ್ಳವರ, ಪ್ರಮೋದ ಮುದ್ದಿ, ಹೊನ್ನಪ್ಪ ಕುದಿಹಾಳ, ವಿದ್ಯಾರ್ಥಿನಿಯರಾದ ಪ್ರಿಯಾ ಎಚ್, ಮೇಘಾ ವೈ, ಭವ್ಯ, ಚೈತ್ರ ಬಿ.ಕೆ., ಸಂಗೀತಾ, ರಕ್ಷಿತಾ ಆರ್., ಸುಪ್ರಿತಾ ಎಸ್., ಮಾಲಾ ಎನ್.ಕೆ. ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts