More

    ಇನ್ಮೇಲೆ ಪ್ರತಿ ತಿಂಗಳೂ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಅಮಿತ್​ ಷಾ, ಜೆ.ಪಿ.ನಡ್ಡಾ

    ಕೋಲ್ಕತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಇನ್ನು ಐದಾರು ತಿಂಗಳು ಬಾಕಿ ಉಳಿದಿರುವಂತೆಯೇ ಬಿಜೆಪಿ ತನ್ನ ನೆಲೆ ಗಟ್ಟಿಗೊಳಿಸುವ ಪ್ರಯತ್ನವನ್ನು ತೀವ್ರಗೊಳಿಸಿದೆ. ಇದಕ್ಕೆ ಪೂರಕವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಚುನಾವಣೆ ಮುಗಿಯುವ ತನಕವೂ ಪ್ರತಿ ತಿಂಗಳು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

    ಪಶ್ಚಿಮ ಬಂಗಾಳದ 294 ಸದಸ್ಯ ಬಲದ ವಿಧಾನಸಭೆಗೆ 2021ರ ಏಪ್ರಿಲ್​-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಅಲ್ಲಿ ತನಕ ಇಬ್ಬರು ಕೇಂದ್ರ ನಾಯಕರು ರಾಜ್ಯದಲ್ಲಿ ಪಕ್ಷದ ಚುನಾವಣಾ ತಯಾರಿಯ ಮೇಲೆ ನಿಗಾವಹಿಸಲಿದ್ದಾರೆ. ಪಕ್ಷದ ಕಾರ್ಯಕರ್ತರಲ್ಲಿ ಉತ್ತೇಜನ ತುಂಬಲಿದ್ದಾರೆ ಎಂದು ಪಕ್ಷದ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಬುಧವಾರ ತಿಳಿಸಿದ್ದಾರೆ.

    ಇದನ್ನೂ ಓದಿ: ರಾಜ್ಯ ಉಸ್ತುವಾರಿ ಪದಾಧಿಕಾರಿಗಳ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಮೊದಲ ಸಭೆ ಗುರುವಾರ

    ಪ್ರಾಥಮಿಕ ಮಾಹಿತಿ ಪ್ರಕಾರ, ಅಮಿತ್ ಷಾ ಅವರು ಪಶ್ಚಿಮ ಬಂಗಾಳದಲ್ಲಿ ಪತ್ರಿ ತಿಂಗಳೂ ಎರಡು ದಿನ ಪ್ರವಾಸ ಮಾಡಿದರೆ, ನಡ್ಡಾ ಅವರು ಮೂರು ದಿನ ಪ್ರವಾಸ ಮಾಡಲಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಎರಡನೇ ಬಾರಿಗೆ ಅಧಿಕಾರ ಬಂದ ಕೂಡಲೇ ತಮ್ಮ ಮುಂದಿನ ಟಾರ್ಗೆಟ್ ಪಶ್ಚಿಮ ಬಂಗಾಳ ಎಂಬುದನ್ನು ಪಕ್ಷ ಸ್ಪಷ್ಟಪಡಿಸಿತ್ತು. (ಏಜೆನ್ಸೀಸ್)

    ವಿಜಯ ನಗರ ಜಿಲ್ಲಾ ರಚನೆ ಯಾರಿಗೆ ಲಾಭ- ನಷ್ಟ : ಮುಂದುವರಿದಿದೆ ರಾಜಕೀಯ ಲೆಕ್ಕಾಚಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts