More

  ಪಂದ್ಯದ ವೇಳೆ ಕ್ರೀಡಾಂಗಣದಲ್ಲೇ ‘ಧಮ್’ ಹೊಡೆದ ಶಾರುಖ್​ ಖಾನ್​; ವಿಡಿಯೋ ವೈರಲ್​

  ಕಲ್ಕತ್ತಾ: ಇಲ್ಲಿನ ಈಡನ್​ ಗಾರ್ಡನ್ಸ್​ ಕ್ರೀಂಢಾಗಣದಲ್ಲಿ ನಡೆದ ಐಪಿಎಲ್​ ಪಂದ್ಯದಲ್ಲಿ ಕಲ್ಕತ್ತಾ ನೈಟ್​ರೈಡರ್ಸ್​ ತಂಡವು ಸನ್​ಸೈಸರ್ಸ್​ ಹೈದರಾಬಾದ್​ ವಿರುದ್ಧ 5ರನ್​ಗಳ ರೋಷಕ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಆ್ಯಂಡ್ರೆ ರಸೆಲ್​ ಸ್ಪೋಟಕ ಬ್ಯಾಟಿಂಗ್​ ಕಲ್ಕತ್ತಾ ಅಭಿಮಾನಿಗಳನ್ನು ಸಂತೋಷಪಡಿಸಿದ್ದಲ್ಲದೆ, ತಂಡದ ಮಾಲೀಕ ಮತ್ತು ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಅವರ ಹೃದಯವನ್ನೂ ಗೆದ್ದಿತು. ಇದರ ನಡುವೆಯೇ ಶಾರುಖ್​ ಅವರ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ತೀವ್ರ ವಿವಾದಕ್ಕೆ ಗುರಿಯಾಗಿದೆ.

  ಕಲ್ಕತ್ತಾ ನೈಟ್​ರೈಡರ್ಸ್​ ಸಹ ಮಾಲೀಕರಾದ ನಟ ಶಾರುಖ್​ ಖಾನ್​ ಮೊದಲ ಪಂದ್ಯದಲ್ಲಿ ತಂಡವನ್ನು ಬೆಂಬಲಿಸಲು ಮೈದಾನದಲ್ಲಿ ಹಾಜರಿದ್ದರು. ಶಾರುಖ್ ಅವರನ್ನು ನೋಡಿ ಅಭಿಮಾನಿಗಳು ಘೋಷಣೆಗಳನ್ನು ಕೂಗಲು ಆರಂಭಿಸಿದರೆ, ಶಾರುಖ್ ಕೂಡ ಫ್ಯಾನ್ಸ್ ಮೇಲೆ ಪ್ರೀತಿಯ ಸುರಿಮಳೆಗೈದು ಕೈಕುಲುಕುತ್ತಲೇ ಫ್ಲೈಯಿಂಗ್ ಕಿಸ್ ನೀಡಿದರು. ಆದರೆ ಈ ಮಧ್ಯೆ ಅವರು ಸಿಗರೇಟ್ ಸೇದುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

  ಇನ್ನಿಂಗ್ಸ್ ಸಮಯದಲ್ಲಿ, ಶಾರುಖ್ ಕ್ರೀಡಾಂಗಣದ ಕಾರ್ಪೊರೇಟ್ ಬಾಕ್ಸ್‌ನಲ್ಲಿ ಕುಳಿತು ಪಂದ್ಯವನ್ನು ಆನಂದಿಸುತ್ತಿದ್ದರು. ಈ ಸಮಯದಲ್ಲಿ ಅವರು ಧೂಮಪಾನ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಧೂಮಪಾನ ಚಟದಿಂದ ಸದಾ ಸುದ್ದಿಯಲ್ಲಿರುವ ಶಾರುಖ್ ಖಾನ್ ಕ್ರಿಕೆಟ್ ಪಂದ್ಯದ ಮಧ್ಯೆ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲೂ ಹೀಗೆ ಮಾಡಿರುವುದು ನೆಟ್ಟಿಗರನ್ನು ಕೆರಳಿಸಿದೆ.

  ಇದೇ ಮೊದಲಲ್ಲ

  ಶಾರುಖ್​ ಐಪಿಎಲ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದಿರುವುದು ಇದೇ ಮೊದಲಲ್ಲ. ಈ ಹಿಂದೆ 2012ರ ಸೀಸನ್‌ನಲ್ಲಿಯೂ ಅವರು ಸ್ಟೇಡಿಯಂನಲ್ಲಿ ಸಿಗರೇಟ್ ಸೇದುತ್ತಿದ್ದ ದೃಶ್ಯ ಕಂಡು ಬಂದಿತ್ತು. ಆಗ ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ಶಾರುಖ್ ಸಿಗರೇಟ್ ಸೇದಿದ್ದರು. ಈ ಸಂಬಂಧ ಜೈಪುರದ ಸ್ಥಳೀಯ ನ್ಯಾಯಾಲಯದಲ್ಲಿ ಅವರ ವಿರುದ್ಧ ಪ್ರಕರಣವೂ ದಾಖಲಾಗಿತ್ತು. ಇದಲ್ಲದೇ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮೈದಾನದ ಸಿಬ್ಬಂದಿಯ ಜತೆಗಿನ ಗಲಾಟೆಯಿಂದ ಹಲವು ವರ್ಷಗಳ ಕಾಲ ಕ್ರೀಡಾಂಗಣಕ್ಕೆ ಬರದಂತೆ ನಿರ್ಬಂಧ ಹೇರಲಾಗಿತ್ತು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts