ಕತಾರ್​ನಿಂದ ನೌಕಾಪಡೆಯ ಮಾಜಿ ಅಧಿಕಾರಿಗಳ ಬಿಡುಗಡೆಯಲ್ಲಿ ನನ್ನ ಪಾತ್ರವಿಲ್ಲ: ಶಾರುಖ್​ ಖಾನ್​

ShahRukh Khan
Published on

ಮುಂಬೈ: ಕತಾರ್​ನಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಗಳ ಬಿಉಡಗಡೆಯಲ್ಲಿ ಬಾಲಿವುಡ್​ ನಟ ಶಾರುಖ್​ ಖಾನ್​ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ನಟನ ಕಚೇರಿ ವಿಚಾರವನ್ನು ತಳ್ಳಿ ಹಾಕಿದೆ.

ಕತಾರ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾ ಸೇನಾ ಮಾಜಿ ಅಧಿಕಾರಿಗಳನ್ನು ಯಶಸ್ವಿಯಾಗಿ ಬಿಡುಗಡೆಗೊಳಿಸುವ ಹಿಂದೆ ನಟ ಶಾರುಖ್ ಖಾನ್ ಪಾತ್ರವಿದೆ ಎಂದು ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯಂ ಸ್ವಾಮಿ ಟ್ವೀಟ್ ಮಾಡಿದ್ದರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಶಾರುಖ್​ ಮ್ಯಾನೇಜರ್​ ಪೂಜಾ ದದ್ಲಾನಿ, ಇವೆಲ್ಲ ಆಧಾರರಹಿತ ಸಮರ್ಥನೆಗಳಾಗಿವೆ ಎಂದು ಹೇಳಿದ್ದಾರೆ.

ಅಧಿಕಾರಿಗಳ ಬಿಡುಗಡೆ ಹಿಂದೆ ಶಾರುಕ್ ಖಾನ್‌ ಅವರ ಪಾತ್ರವಿದೆ ಎಂದು ವರದಿಯಾಗಿದ್ದು, ಇವೆಲ್ಲ ಆಧಾರರಹಿತ ಸಮರ್ಥನೆಗಳಾಗಿವೆ. ರಾಜತಾಂತ್ರಿಕ ವಿಷಯವನ್ನು ಸರ್ಕಾರ ಸಮರ್ಥವಾಗಿ ನಿರ್ವಹಿಸಿದ್ದು, ಅಧಿಕಾರಿಗಳ ಬಿಡುಗಡೆಯ ಸಂಪೂರ್ಣ ಯಶಸ್ಸು ಸರ್ಕಾರಕ್ಕೆ ಸಲ್ಲುತ್ತದೆ. ಇದರಲ್ಲಿ ಶಾರುಕ್‌ ಖಾನ್‌ ಅವರ ಪಾತ್ರವಿದೆ ಎಂಬುವುದು ಸತ್ಯಕ್ಕೆ ದೂರವಾದ ಮಾತು.

ನೌಕಾಪಡೆಯ ಅಧಿಕಾರಿಗಳೆಲ್ಲರು ಮರಣದಂಡನೆ ಶಿಕ್ಷೆಯಿಂದ ಪಾರಾಗಿ ತವರು ಸೇರಿರುವುದು ಎಲ್ಲ ಭಾರತೀಯರಂತೆ ಶಾರುಕ್ ಅವರಿಗೂ ಸಂತಸ ತಂದಿದೆ ಎಂದು ಶಾರುಖ್​ ಖಾನ್​ ಅವರ ಮ್ಯಾನೇಜರ್​ ಪೂಜಾ ದದ್ಲಾನಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಲಾಗಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೇಹುಗಾರಿಕೆ ಆರೋಪದಲ್ಲಿ ಬಂಧಿತರಾಗಿ ಕತಾರ್​ನ ಸೆರೆಮನೆಯಲ್ಲಿದ್ದ ಭಾರತೀಯ ನೌಕಾ ಪಡೆಯ ಎಂಟು ನಿವೃತ್ತ ಅಧಿಕಾರಿಗಳನ್ನು ಕತಾರ್ ಸರ್ಕಾರ ಸೋಮವಾರ ಬಿಡುಗಡೆ ಮಾಡಿದ್ದು, ಅವರಲ್ಲಿ ಏಳು ಜನರು ಸ್ವದೇಶಕ್ಕೆ ಮರಳಿದ್ದಾರೆ. ಕತಾರ್​ನ ನ್ಯಾಯಾಲಯ ಎಂಟೂ ಜನರಿಗೆ ವಿಧಿಸಿದ್ದ ಮರಣದಂಡನೆಯು ಕೇಂದ್ರ ಸರ್ಕಾರದ ಸತತ ರಾಜತಾಂತ್ರಿಕ ಪ್ರಯತ್ನಗಳಿಂದಾಗಿ ಜೈಲು ಶಿಕ್ಷೆಯಾಗಿ ಪರಿವರ್ತನೆಗೊಂಡ 46 ದಿನಗಳ ನಂತರ ಬಿಡುಗಡೆಯಾಗಿರುವ ಮಾಜಿ ಯೋಧರ ಕುಟುಂಬಗಳಲ್ಲಿ ಸಂತಸ ಮುಗಿಲು ಮುಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net