

ಮುಂಬೈ: ಬಾಲಿವುಡ್ ಕಿಂಗ್ ಖಾನ್, ನಟ ಶಾರೂಖ್ ಖಾನ್ ಅಭಿನಯದ ಬಹುನಿರೀಕ್ಷಿತ 'ಜವಾನ್' ಚಿತ್ರ ಇಂದು ದೇಶಾದ್ಯಂತ ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡಿದ್ದು, ಸಿನಿಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ: ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅಪಾರ
ಅಟ್ಲಿ ನಿರ್ದೇಶನದಲ್ಲಿ ಮೂಡಿಬಂದಿರುವ 'ಜವಾನ್' ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿದ್ದು, ಶಾರೂಖ್ ಖಾನ್ ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಚಿತ್ರಮಂದಿರಗಳಿಗೆ ತೆರಳಿದ್ದಾರೆ. ಎಸ್ಆರ್ಕೆ ಮೇಲಿನ ಅಭಿಮಾನವನ್ನು ವಿಶೇಷ ರೀತಿಯಲ್ಲಿ ಪ್ರದರ್ಶಿಸಲು ಮುಂದಾದ ಫ್ಯಾನ್ಸ್, ಜವಾನ್ ಪೋಸ್ಟರ್ನಲ್ಲಿ ಶಾರೂಖ್ ಮುಖಕ್ಕೆ ಬ್ಯಾಂಡೇಜ್ ಧರಿಸಿದಂತೆ, ತಾವು ಸುತ್ತಿಕೊಂಡು ಥಿಯೇಟರ್ಗಳಿಗೆ ಬಂದಿದ್ದಾರೆ. ಈ ಮುಖೇನ ವಿಭಿನ್ನ ರೀತಿಯಲ್ಲಿ ತಮ್ಮ ನೆಚ್ಚಿನ ನಟನ ಚಿತ್ರಕ್ಕೆ ಬೆಂಬಲ ಸೂಚಿಸಿದ್ದಾರೆ.
ಇದನ್ನೂ ಓದಿ: ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಮುಖಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಚಿತ್ರಮಂದಿರಗಳಿಗೆ ಬಂದ ಶಾರೂಖ್ ಖಾನ್ ಅಭಿಮಾನಿಗಳು, ಇತರ ಚಿತ್ರರಸಿಕರ ಗಮನ ಸೆಳೆದಿದ್ದಾರೆ. ನಟನ ಡೈಲಾಗ್, ಶಿಳ್ಳೆ ಹೊಡೆದು ಸಿನಿಮಾವನ್ನು ಸಂಭ್ರಮಿಸಿದ್ದಾರೆ.