More

  ಶಾಕೀರ, ವಿನೋದಗೆ ಪ್ರಾಧಿಕಾರದ ಪಟ್ಟ

  ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಕಾಂಗ್ರೆಸ್​ನ ಇಬ್ಬರು ಯುವ ನಾಯಕರಿಗೆ ರಾಜ್ಯ ಸರ್ಕಾರ ನಿಗಮ, ಮಂಡಳಿಯಲ್ಲಿ ಸ್ಥಾನ ನೀಡಿದೆ.

  ಮಾಜಿ ಸಂಸದ ಪ್ರೊ. ಐ.ಜಿ. ಸನದಿ ಅವರ ಪುತ್ರ ಶಾಕೀರ ಸನದಿ ಅವರಿಗೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಶಾಕೀರ ಸನದಿ ಧಾರವಾಡ ಲೋಕಸಭೆ ಕ್ಷೇತ್ರದ ಆಕಾಂಕ್ಷಿಯೂ ಆಗಿದ್ದರು. ಹಲವಾರು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು. ನಗರಾಭಿದ್ಧಿ ಪ್ರಾಧಿಕಾರಕ್ಕಾಗಿ ಹುಬ್ಬಳ್ಳಿ-ಧಾರವಾಡದ ಹಲವಾರು ಮುಖಂಡರ ಹೆಸರುಗಳು ಕೇಳಿಬಂದಿದ್ದವು. ಹುಡಾ ಅಧ್ಯಕ್ಷಗಿರಿ ಪಟ್ಟ ಅಂತಿಮವಾಗಿ ಶಾಕೀರ ಅವರಿಗೆ ಒಲಿದಿದೆ.

  ನವಲಗುಂದ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತರಾಗಿದ್ದ ವಿನೋದ ಅಸೂಟಿ ಅವರಿಗೆ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸ್ಥಾನ ನೀಡುವ ಮೂಲಕ ಅವರನ್ನು ಸಮಾಧಾನ ಪಡಿಸುವ ಕೆಲಸವನ್ನು ಸರ್ಕಾರ ಮಾಡಿದೆ. ವಿನೋದ ಅಸೂಟಿ ಅವರು ಧಾರವಾಡ ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts