More

    ಹುಸಿಯಾದ ಬಿಜೆಪಿ ಕಠಿಣ ಕ್ರಮದ ಭರವಸೆ; ಬೇಸತ್ತು ಪಕ್ಷದ ಜಿಲ್ಲಾ ಸಹ ಸಂಚಾಲಕಿ ರಾಜೀನಾಮೆ..

    ತುಮಕೂರು: ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರೆ ಕೊಲೆಯಿಂದ ತೀವ್ರ ಬೇಸರಕ್ಕೀಡಾಗಿರುವ ಬಿಜೆಪಿ ಕಾರ್ಯಕರ್ತರು, ಬಿಜೆಪಿ ರಾಜ್ಯಾಧ್ಯಕ್ಷ, ಸಚಿವರ ಕಾರು ತಡೆದು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಬೆನ್ನಿಗೇ ರಾಜೀನಾಮೆ ಮೂಲಕವೂ ಅದನ್ನು ವ್ಯಕ್ತಪಡಿಸುವ ನಡೆಯೂ ಜರುಗಿದೆ.

    ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕಿ ಶಕುಂತಲಾ ನಟರಾಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪಕ್ಷದ ಹಾಗೂ ನಾಯಕರ ನಡೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    “ಬಿಜೆಪಿ ಇದೊಂದು ಕೇವಲ ರಾಜಕೀಯ ಪಕ್ಷವಲ್ಲ, ಈ ಪಕ್ಷಕ್ಕೆ ತನ್ನದೇ ಆದಂತಹ ಇತಿಹಾಸ ವಿಚಾರ ಸಿದ್ಧಾಂತಕ್ಕಾಗಿ ಅನೇಕ ಕಾರ್ಯಕರ್ತರ ಬಲಿದಾನ ನಡೆದಿರುವಂತದ್ದು ಇತಿಹಾಸವಾದರೆ ಇಂದಿನ ಕಾಲಘಟ್ಟದಲ್ಲೂ ಕೂಡ ಸೈದ್ಧಾಂತಿಕ ವಿಚಾರಧಾರೆಗೆ ಹೋರಾಡುವಂತಹ ದುರ್ಗತಿ ಬಂದು ಒದಗಿರುವುದು ಕಾರ್ಯಕರ್ತರಿಗೆ ನೋವಾಗುತ್ತಿದೆ. ಪ್ರವೀಣ್ ನೆಟ್ಟಾರೆ ಸಾವು ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು ಅಮಾನುಷವಾಗಿ ಬರ್ಬರವಾಗಿ ರಾತ್ರಿ ಸಮಯದಲ್ಲಿ ಹಿಂದಿನಿಂದ ಬಂದು ಹೊಡೆದಿರುವುದು ಹೇಡಿಗಳ ಕೃತ್ಯವಾಗಿದೆ. ಬಿಜೆಪಿಯ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತರಾಗಿ ತೊಡಗಿಸಿಕೊಂಡಿದ್ದ ಯುವ ನಾಯಕ ಇಂದು ಸಮಾಜಕ್ಕಾಗಿ ಪ್ರಾಣ ತೆತ್ತಿರುವುದು ದುರ್ದೈವದ ಸಂಗತಿ. ಕರ್ನಾಟಕ ಸರ್ಕಾರ ಆರೋಪಿಗಳನ್ನು ಬಂಧಿಸಿ ಉಗ್ರ ಶಿಕ್ಷೆಯನ್ನು ನೀಡಬೇಕು ಹಾಗೂ ಮುಂದೆ ಮತ್ತೆಂದೂ ಕೂಡ ಈ ತರಹದ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸುತ್ತೇನೆ.

    ಹಿಂದೆಲ್ಲಾ ನಡೆದಂತಹ ಕೊಲೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣ ಮುಂದೆಯೇ ಇದೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗೆ ಉಳಿದಿರುವ ಕಾರಣ ಬಿಜೆಪಿ ತುಮಕೂರು ಜಿಲ್ಲೆಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ” ಎಂಬುದಾಗಿ ಅವರು ರಾಜೀನಾಮೆ ಕಾರಣವನ್ನು ವಿವರವಾಗಿ ಹೇಳಿಕೊಂಡಿದ್ದಾರೆ.

    ಹುಸಿಯಾದ ಬಿಜೆಪಿ ಕಠಿಣ ಕ್ರಮದ ಭರವಸೆ; ಬೇಸತ್ತು ಪಕ್ಷದ ಜಿಲ್ಲಾ ಸಹ ಸಂಚಾಲಕಿ ರಾಜೀನಾಮೆ.. ಹುಸಿಯಾದ ಬಿಜೆಪಿ ಕಠಿಣ ಕ್ರಮದ ಭರವಸೆ; ಬೇಸತ್ತು ಪಕ್ಷದ ಜಿಲ್ಲಾ ಸಹ ಸಂಚಾಲಕಿ ರಾಜೀನಾಮೆ..

    ಪಿಎಸ್​ಐ ಹಗರಣದ ಬಗ್ಗೆ ನನಗೆ ಮೊದಲೇ ಗೊತ್ತಿತ್ತು: ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts