ಪೋಲ್ ವಾಲ್ಟ್ ಸ್ಪರ್ಧೆಯಲ್ಲಿ ಶಮಾ ರಾಜ್ಯಮಟ್ಟಕ್ಕೆ

shama
ಶಮ
Published on

ಹೆಬ್ರಿ: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜು ಪ್ರಾಂಶುಪಾಲರ ಸಂಘದ ಆಶ್ರಯದಲ್ಲಿ ಉಡುಪಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದ ಪೋಲ್ ವಾಲ್ಟ್ ಸ್ಪರ್ಧೆಯಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಶಮಾ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net